Advertisement

ಸಿಎಂ ತುರ್ತು ಸುದ್ದಿಗೋಷ್ಠಿ : ಇಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ರದ್ದು

12:54 AM Jul 28, 2022 | Team Udayavani |

ಬೆಂಗಳೂರು : ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರದ್ದು ಪಡಿಸಿದ್ದಾರೆ.

Advertisement

ಬುಧವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ರಾಜ್ಯ ಬಿಜೆಪಿ ಸರಕಾರದ ಮೂರು ವರ್ಷ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ 1 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಗುರುವಾರ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಾಧನಾ ಸಮಾವೇಶ ಕಾರ್ಯಕ್ರಮ ನಡೆಸಲು ತಯಾರಿ ನಡೆಸಲಾಗಿತ್ತು, ಆದರೆ ಮಂಗಳವಾರ ರಾತ್ರಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಪೂಜಾರಿ ಅವರನ್ನು ದುಷ್ಕರ್ಮಿಗಳ ತಂಡ ಹತ್ಯೆ ನಡೆಸಿತ್ತು ಈ ಹಿನ್ನಲೆಯಲ್ಲಿ ಹಿಂದೂ ಕಾರ್ಯಕರ್ತರು ಸರಕಾರದ ವೈಫಲ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಈ ಎಲ್ಲಾ ವಿದ್ಯಮಾನಗಳನ್ನು ಅವಲೋಕಿಸಿ ಸಿಎಂ ಬೊಮ್ಮಾಯಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅರೋಗ್ಯ ಸಚಿವ ಕೆ. ಸುಧಾಕರ್ ಜೊತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next