Advertisement

ರಾಜ್ಯಸಭೆಗೆ ಡಾ.ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ: ಹರ್ಷ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

11:21 PM Jul 06, 2022 | Team Udayavani |

ಬೆಂಗಳೂರು : ರಾಜ್ಯಸಭೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಮ ನಿರ್ದೇಶನಗೊಂಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಡಾ. ಹೆಗ್ಗಡೆಯವರನ್ನು ಅಭಿನಂದಿಸಿರುವ ಮುಖ್ಯಮಂತ್ರಿಗಳು, ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳ ಹಾಗೂ ಆಯಾಮಗಳಲ್ಲಿ ಜನಜೀವನದಲ್ಲಿ ಸಕಾರಾತ್ಮಕ ಬೆಳವಣಿಗೆಗೆ ಶ್ರಮಿಸುತ್ತಿರುವ ಶ್ರೀ ಹೆಗ್ಗಡೆಯವರ ಅನುಭವ ಸಂಸತ್ತಿನ ಕಲಾಪಗಳ ಸತ್ವ ಹೆಚ್ಚಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ರಾಜ್ಯಸಭೆಗೆ ನಾಮನಿರ್ದೇಶನಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಂಥ ಅರ್ಹರನ್ನು ಶಿಫಾರಸು ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
ಅವರೊಂದಿಗೆ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಒಲಿಂಪಿಯನ್ ಅಥ್ಲೀಟ್ ಆಗಿದ್ದ ಪಿ. ಟಿ. ಉಷಾ, ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಹಾಗೂ ಖ್ಯಾತ ಚಿತ್ರ ನಿರ್ದೇಶಕ, ಚಿತ್ರ ಸಾಹಿತಿ ಕೆ.ವಿ. ವಿಜಯೇಂದ್ರ ಪ್ರಸಾದ್ ಅವರನ್ನೂ ಮುಖ್ಯಮಂತ್ರಿಗಳು ಅಭಿನಂದಿಸಿದ್ದಾರೆ.

ಇದನ್ನೂ ಓದಿ : ಪಾವಗಡ : ಆಟೋ ರಿಕ್ಷಾ – ಬೊಲೆರೋ ನಡುವೆ ಅಪಘಾತ : ಹಲವರಿಗೆ ಗಾಯ, ಆಸ್ಪತ್ರೆಗೆ ದಾಖಲು

Advertisement

Udayavani is now on Telegram. Click here to join our channel and stay updated with the latest news.

Next