Advertisement
ಅವರು ಇಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ವಿ.ಐ.ಎನ್.ಪಿ ಸಕ್ಕರೆ ಕಾರ್ಖಾನೆ ಸ್ಥಳಕ್ಕೆ ಭೇಟಿ ನೀಡಿ, ಡಿಸ್ಟಲರಿ ಘಟಕದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
Related Articles
Advertisement
ಇದನ್ನೂ ಓದಿ:ಅಲ್ಪಸಂಖ್ಯಾತರ ರಕ್ಷಣೆ ಹಿಂದೆಯೂ ಮಾಡಿದ್ದೇವೆ,ಇನ್ನೂ ಮಾಡುತ್ತೇವೆ:ಹಿಜಾಬ್ ವಿಚಾರಕ್ಕೆ ಡಿಕೆಶಿ
ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿ: ಶಿಗ್ಗಾಂವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ಮೂಲಭೂತ ಸೌಕರ್ಯ,ಕೈಗಾರಿಕೆಗಳ ಅಭಿವೃದ್ಧಿಗಾಗಿ ದೂರದೃಷ್ಟಿಯ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇಲ್ಲಿ ಗಾರ್ಮೆಂಟ್ಸ್, ಟೆಕ್ಸ್ ಟೈಲ್ ಕಾರ್ಖಾನೆ ಬರಲಿದೆ. ಬೆಂಗಳೂರು ನಗರಕ್ಕೇ ಮೀಸಲಾಗಿರುವ ಕೆಲವೊಂದು ಕಾರ್ಖಾನೆಗಳನ್ನು ಉತ್ತರ ಕರ್ನಾಟಕಕ್ಕೆ ತರುವ ಚಿಂತನೆಯಿಂದ ‘ಬಿಯಾಂಡ್ ಬೆಂಗಳೂರು’ಯೋಜನೆಯನ್ನು ಜಾರಿಗೆ ತರಲಾಗಿದೆ. ಯುವಕರ ಭವಿಷ್ಯ ಉಜ್ವಲವಾಗಿ ಸ್ವಾಭಿಮಾನದಿಂದ ಬದುಕಲು ಈ ಎಲ್ಲಾ ಕಾರ್ಖಾನೆಗಳನ್ನು ಸ್ಥಾಪಿಸಲಾಗುತ್ತಿದೆ. ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವರದಾ ನದಿಯಿಂದ ಕೋಣನಕೆರೆ,ತಡಸದವರೆಗೂ ನೀರು ಹರಿಸಿ, ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನು ಮಾಡಲಾಗಿದೆ. ಸವಣೂರು, ಬ್ಯಾಡಗಿ, ಹಾನಗಲ್ ನಲ್ಲಿ ಏತನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಕೆಎಂಎಫ್ ಘಟಕ: ಹಾವೇರಿ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಗಣನೀಯ ಪ್ರಮಾಣದಲ್ಲಿರುವುದರಿಂದ ಪ್ರತ್ಯೇಕ ಕೆಎಂಎಫ್ ಘಟಕದ ಬೇಡಿಕೆ ಇತ್ತು. ರೈತರು, ಕಾರ್ಮಿಕರು, ದುಡಿಯುವ ವರ್ಗಗಳ ಬದುಕು ಹಸನಾಗಿಸಲು ಸರ್ಕಾರ ಕೆಲಸ ಮಾಡುತ್ತಿದೆ. ಕೆಎಂಎಫ್ ಘಟಕ ಸ್ಥಾಪನೆಗೆ 30 ಕೋಟಿ ರೂ. ಮಂಜೂರು ಮಾಡಲಾಗಿದ್ದು, 20 ಕೋಟಿ ರೂ. ವೆಚ್ಚದಲ್ಲಿ ಹಾಲಿನ ಸಂಸ್ಕರಣಾ ಘಟಕ ನಿರ್ಮಿಸಲಾಗುತ್ತಿದೆ ಎಂದರು.
ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶಾಸಕ ನೆಹರೂ ಓಲೇಕಾರ್, ಸಕ್ಕರೆ ಕಾರ್ಖಾನೆ ಮುಖ್ಯಸ್ಥ ವಿವೇಕ ಹೆಬ್ಬಾರ, ಮತ್ತು ಇತರರು ಉಪಸ್ಥಿತರಿದ್ದರು.