Advertisement
ರಾಜ್ಯಾದ್ಯಂತ ಕೊವಿಡ್ ನಿಯಂತ್ರಣಕ್ಕೆ ಲಿಸಿಕೆ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ಲಸಿಕಾಕರಣ ಕಡಿಮೆಯಾದರೆ ಜಿಲ್ಲಾಧಿಕಾರಿಗಳೆ ಹೊಣೆಗಾರರನ್ನಾಗಿ ಮಾಡುವುದಾಗಿ ಸಿಎಂ ತಾಕೀತು ಮಾಡಿದ್ದಾರೆ.
Related Articles
Advertisement
ಕರ್ನಾಟಕದಲ್ಲಿ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚಿದ್ದರೂ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ. ಮುನ್ನೆಚ್ಚರಿಕಾ ಕ್ರಮಗಳು ಉತ್ತಮವಾಗಿದ್ದರೆ ಕೋವಿಡ್ ಮೂರನೇ ಅಲೆ ಏರುಗತಿ ತಲುಪಿದರೂ ಆತಂಕ ಪಡದೆ ಯಶಸ್ವಿಯಾಗಿ ಮೂರನೇ ಅಲೆ ನಿಭಾಯಿಸಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಸಿಎಂ ನೀಡಿರುವ ಪ್ರಮುಖ ಸೂಚನೆಗಳು :– ಮೊದಲನೇ ಹಾಗೂ 2 ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ರಾಜ್ಯ ಸರಾಸರಿಯನ್ನು ತಲುಪಬೇಕು. – ಪ್ರತಿ ಗ್ರಾಮದ ಕಟ್ಟಕಡೆಯ ಮನೆಗೂ ಔಷಧ ಕಿಟ್ ಗಳನ್ನು ತಲುಪಿಸಬೇಕು. ಹೋಮ್ ಐಸೋಲೇಶನ್‌ನಲ್ಲಿರುವವರಿಗೆ ಸರಿಯಾದ ಚಿಕಿತ್ಸೆ ನೀಡಬೇಕು. – ಜಿಲ್ಲಾಧಿಕಾರಿಗಳು, ಡಿ.ಹೆಚ್.ಒ ಗಳು ತಾಲ್ಲೂಕುಗಳಿಗೆ ಭೇಟಿ ನೀಡಿ ಔಷಧ ವಿತರಣೆಯ ಬಗ್ಗೆ ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಬೇಕು. – ಪ್ರಯೋಗಾಲಯದ ವರದಿ ಬಂದ ತಕ್ಷಣ ಟೆಲಿ ಟ್ರಯಾಜಿಂಗ್ ಮಾಡಬೇಕು. – ಶೇ 94% ರಷ್ಟು ಸೋಂಕಿತರು ಹೋಮ್ ಐಸೋಲೇಶನ್ ಇರುವುದರಿಂದ ಮನೆಯವರಿಗೆ ಹರಡದಂತೆ ಕ್ರಮ ಕೈಗೊಳ್ಳಬೇಕು. ಸೋಂಕಿತರ ಮನೆಯವರಿಗೂ ಪರೀಕ್ಷೆ ಮಾಡಿ ಅಗತ್ಯವಿದ್ದರೆ ಚಿಕಿತ್ಸೆ ನೀಡಬೇಕು. – ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಪ್ರಾರಂಭ ಮಾಡಿ ವೈದ್ಯರು ಹಾಗೂ ಎ. ಎನ್.ಎಂ ಗಳು ಮನೆ ಮನೆ ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಎಸ್.ಒ. ಪಿ ರೂಪಿಸಲು ನಿರ್ಧಾರ – ಬೆಂಗಳೂರಿನಲ್ಲಿ ಖಾಸಗಿ ಹಾಗೂ ಸರ್ಕಾರಿ ಒ.ಪಿ.ಡಿಗಳನ್ನು ಬಲಪಡಿಸಲು ಹಾಗೂ ಜನಸಂಖ್ಯೆಗೆ ಅನುಗುಣವಾಗಿ ಹೊಸ ಒಪಿಡಿಗಳನ್ನು ತೆರೆಯಲು ಕ್ರಮ – ಕೆಲಸಕ್ಕಾಗಿ ಹೊರ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ರಾಜ್ಯದ ಕೈಗಾರಿಕೆಗಳಿಗೆ ಕಾರ್ಮಿಕರ ಲಸಿಕೆ ಹಾಗೂ ಚಿಕಿತ್ಸೆ ಕುರಿತು ವಿಶೇಷ ಎಸ್.ಒ.ಪಿ ಜಾರಿ – ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವುದರಿಂದ ಕೋ- ಮಾರ್ಬಿಡಿಟಿ ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್ ನಲ್ಲಿರುವವರಿಗೆ ಟೆಸ್ಟ್ ಮಾಡಿ ಚಿಕಿತ್ಸೆ ನೀಡಬೇಕು. – ಕೋ- ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷಗಳಿಗೂ ಮೇಲ್ಪಟ್ಟವರಿಗೆ ಪರೀಕ್ಷೆಗಳನ್ನು ಹೆಚ್ಚಿಸಿ ಔಷಧಿ ಒದಗಿಸಬೇಕು. – ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಬೇಕು – ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಅಭಿಯಾನ ಕೈಗೊಳ್ಳಬೇಕು. – ಲಸಿಕೆ ಪಡೆದು 90 ದಿನ ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ನೀಡಲು ಸೂಚನೆ.