ಬೆಂಗಳೂರು : ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಸರಕಾರದ ಆಯವ್ಯಯ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ. ೧೪ರಿಂದ ೨೫ರ ವರೆಗೆ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಸಲಾಗುವುದು. ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸುತ್ತೇನೆ ಎಂದು ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿಗಳ ನೇಮಕದ ಬಗ್ಗೆ ಚರ್ಚೆ ಆಗಿಲ್ಲ. ಕೊರೊನಾ ಬಗ್ಗೆ ಚರ್ಚೆ ಮಾಡಿದ್ದೇವೆ.ರಾಜ್ಯದಲ್ಲಿ ಶಾಲಾ ಕಾಲೇಜುಗಳ ಆರಂಭದ ಬಗ್ಗೆ ಚರ್ಚೆ ಮಾಡಿದ್ದೇವೆ.ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದು 6 ತಿಂಗಳಾಗುತ್ತಿರುವ ಕಾರಣಮುಂದಿನ ಒಂದು ವಾರ ಆಯಾ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು, ಸುದ್ದಿಗೋಷ್ಟಿ ನಡೆಸಬೇಕು.ಅವರವರ ಇಲಾಖೆಯಲ್ಲಿ ಆಗಿರುವ ಕೆಲಸವನ್ನು ತಿಳಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಇವತ್ತು ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ.ಕೋವಿಡ್ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಚರ್ಚೆ ಮಾಡಿದೀವಿ.ನಿಯಮ ಸಡಿಲಿಕೆ ಬಗ್ಗೆ ಬೇರೆ ಬೇರೆ ವಲಯದವರ ಮನವಿ, ಶಾಲಾ ಕಾಲೇಜುಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಎಲ್ಲ ಸಚಿವರೂ ತಮ್ಮ ಅಭಿಪ್ರಾಯ ಹೇಳಿದ್ದಾರೆ ತಜ್ಞರ ಸಮಿತಿಯಿಂದ ವರದಿ ಕೇಳಿದ್ದೇವೆ.ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರ ವರದಿ ಬಂದ ಬಳಿಕ ನಿರ್ಧರಿಸುತ್ತೇವೆ ಎಂದು ವಿವರಿಸಿದರು.
ಬಿಬಿಎಂಪಿ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ಆಗಿದೆ.ಚುನಾವಣೆ ಯಾವಾಗ ಬಂದರೂ ಯಶಸ್ವಿಯಾಗಿ ನಿಭಾಯಿಸಲು ಸೂಚನೆ ನೀಡಿದ್ದೇನೆ.ಬೆಂಗಳೂರಿನ ಸಚಿವರ ಜತೆ ಹೊರಗಿನ ಸಚಿವರ ಮೂಲಕವೂ ನಿಭಾಯಿಸಿ ಯಶಸ್ವಿಯಾಗಿ ನಡೆಸ್ತೇವೆ.ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳ ಚುನಾವಣೆ ಬಗ್ಗೆಯೂ ಚರ್ಚಿಸಿದ್ದೇವೆ. ಶಾಸಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಚಿವರಿಗೆ ಸೂಚಿಸಲಾಗಿದೆ ಎಂದರು. ನಾಳೆಯ ಕಾರ್ಯಕ್ರಮ, ಕಾರ್ಯಕ್ರಮಗಳ ಕುರಿತ ಪುಸ್ತಕ ಬಿಡುಗಡೆ ಬಗ್ಗೆಯೂ ಚರ್ಚಿಸಲಾಗಿದೆ. ನಂದಿ ಬೆಟ್ಟದಲ್ಲಿ ನಡೆಸಲು ಉದ್ದೇಶಿದ್ದ ಬೈಠಕ್ ಚಿಂತನಾ ಸಭೆ ಬಗ್ಗೆ ಚರ್ಚೆ.ಆದಷ್ಟು ಬೇಗ ಚಿಂತನ ಮಂತನ ಸಭೆ ನಡೆಸ್ತೇವೆ ಎಂದು ಹೇಳಿದರು.
ರೇಸ್ ಕೋರ್ಸ್ ನಲ್ಲಿ ಟರ್ಫ್ ಕ್ಲಬ್ ನಿಂದ ಡರ್ಬಿರೇಸ್ ನಡೆಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ಇದರ ಬಗ್ಗೆ ಪರಿಶೀಲಿಸಿ ಕ್ರಮ. ನಿಯಮಗಳ ಉಲ್ಲಂಘನೆ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ ಸಭೆ ಬಗ್ಗೆ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿ ಕಾಂಗ್ರೆಸ್ ಇರೋದೇ ಆರೋಪ ಮಾಡುವುದಕ್ಕೆ. ಅವರು ಅಧಿಕಾರದಲ್ಲಿ ಇದ್ದಾಗ ಏನೆಲ್ಲ ಮಾಡಿದಾರೆ ಅಂತ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.
ಸಂಪುಟ ಪುನಾರಚನೆ ವಿಚಾರ ಸಂಬಂಧ ವರಿಷ್ಠರ ಜತೆ ಮಾತಾಡುತ್ತೇನೆ.ವರಿಷ್ಠರು ಕರೆದರೆ ದೆಹಲಿಗೆ ಹೋಗ್ತೇನೆ. ಎಲ್ಲ ಸಂಸದರ ಜತೆ ಸಭೆ ನಡೆಸುವ ಬಗ್ಗೆ ಚಿಂತನೆ ಮಾಡುತ್ತೇನೆ ಎಂದರು.