ಬೆಂಗಳೂರು: ಸ್ವಿಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಾಸಾದರು.
ಇಂಧನ ಸಚಿವ ಸುನಿಲ್ ಕುಮಾರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ ರೆಡ್ಡಿ, ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ವಿಮಾನ ನಿಲ್ದಾಣದಲ್ಲಿ ಸಿಎಂ ಗೆ ಸ್ವಾಗತ ಕೋರಿದರು.
ದಾವೋಸ್ ಪ್ರವಾಸದ ಕುರಿತಾಗಿ ಸಿಎಂ ಬೊಮ್ಮಾಯಿ ಇಂದು ಮಧ್ಯಾಹ್ನ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಮೇ.22ರಂದು ದಾವೋಸ್ ಗೆ ತೆರಳಿದ್ದ ಸಿಎಂ ಬೊಮ್ಮಾಯಿ ಅಲ್ಲಿ ಹಲವು ಉದ್ಯಮಿಗಳೊಂದಿಗೆ ಮಾತುಕತೆ ನಡೆಸಿದ್ದರು.
ಇದನ್ನೂ ಓದಿ:ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು
Related Articles
ಲೂಲೂ ಸೇರಿದಂತೆ ಹಲವು ಉದ್ಯಮಗಳು ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದು, ದಾವೂಸ್ ನಲ್ಲಿ ಈ ಬಗ್ಗೆ ಹಲವು ಒಪ್ಪಂದಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿ ಹಾಕಿದ್ದಾರೆ.