Advertisement

ಪಠ್ಯಕ್ರಮದಲ್ಲಿ ನಾಡಿನ ವೀರ ಮಹಿಳೆಯರ ಕುರಿತ ಪಾಠಗಳ ಅಳವಡಿಕೆಗೆ ಕ್ರಮ: ಸಿಎಂ ಬೊಮ್ಮಾಯಿ

10:18 AM Feb 28, 2022 | Team Udayavani |

ಹುಬ್ಬಳ್ಳಿ: ಮುಂದಿನ ಪೀಳಿಗೆಗೆ ನಾಡಿನ ವೀರ ಮಹಿಳೆಯರಾದ ಬೆಳವಾಡಿ ಮಲ್ಲಮ್ಮ, ಕೆಳದಿ ಚನ್ನಮ್ಮ, ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕ್ಕ ಅವರ ಕುರಿತಾದ ಪಾಠಗಳನ್ನು ಪಠ್ಯಕ್ರಮದಲ್ಲಿ ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಅವರು ಇಂದು ಬೆಳವಡಿ ಮಲ್ಲಮ್ಮ ಮರಾಠಾ ಸೈನ್ಯದ ವಿರುದ್ಧ ಜಯಗಳಿಸಿದ 374 ನೇ ವರ್ಷಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಬೆಳವಡಿಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ನಿನ್ನೆ ಕೆಳದಿ ಚನ್ನಮ್ಮನ ಪಟ್ಟಾಭಿಷೇಕದ 350 ನೇ ವರ್ಷದ ಆಚರಣೆಯನ್ನೂ ಮಾಡಿದ್ದೇವೆ. ಕರ್ನಾಟಕಕ್ಕೆ ಮಹಿಳೆಯರ ಕೊಡುಗೆ ಅಪಾರವಾಗಿದೆ. ಅದು ಇಂದಿನ ಪೀಳಿಗೆಗೆ ತಿಳಿಸಬೇಕು. ಕಿತ್ತೂರು ರಾಣಿ ಚೆನ್ನಮ್ಮ ಮೊದಲುಗೊಂಡು ಮಹಿಳೆಯರ ಪಾತ್ರವನ್ನು ಪ್ರಮುಖವಾಗಿ ಯುವಜನಾಂಗ ಕ್ಕೆ ತಿಳಿಸುವ ಕೆಲಸವಾಗಬೇಕು. ಮುಂದಿನ ವರ್ಷ ಬೆಳವಡಿಯಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಇದನ್ನೂ ಓದಿ:ಎಚ್‌.ಡಿ.ದೇವೇಗೌಡರ ಮೊಮ್ಮಕ್ಕಳಿಂದ ಪಾದಯಾತ್ರೆ

ಈ ಸಂಸ್ಥಾನ ಬೆಳೆದು ಬಂದ ರೀತಿ, ಶಿವಾಜಿ ಮಹಾರಾಜರ ವಿರುದ್ಧ ಅವರ ಹೋರಾಟದ ಬಗ್ಗೆ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮಿಗಳಿಗೆ ಅಪಾರ ಜ್ಞಾನವಿದೆ. ಅವರ ಕಳಕಳಿ, ನಾಡಿನ ಬಗ್ಗೆ ಅವರ ಪ್ರೀತಿಯಿಂದ ಕಾರ್ಯಕ್ರಮ ಆಯೋಜನೆಗೊಂಡಿದೆ ಎಂದು ಅಭಿನಂದಿಸಿದರು.

Advertisement

ಈ ಸಂದರ್ಭದಲ್ಲಿ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್, ಶಾಸಕ ಅರುಣ್ ಶಾಹಪುರ, ಮಾಜಿ ಶಾಸಕ ಮೋಹನ್ ಲಿಂಬಿಕಾಯಿ ಮತ್ತು ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next