ಪಡುಬಿದ್ರಿ : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಬಸವರಾಜ್ ಬೊಮ್ಮಾಯಿ ಅವರನ್ನು ಜಿಲ್ಲೆಯ ಗಡಿಭಾಗದ ಹೆಜಮಾಡಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪುಷ್ಪಗುಚ್ಛ, ಹೂಹಾರದ ಬದಲಾಗಿ ಪುಸ್ತಕ ನೀಡಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.
ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖಾ ಸಚಿವ ವಿ. ಸುನಿಲ್ ಕುಮಾರ್, ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ, ಉದಯ್ ಕುಮಾರ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್, ಪಕ್ಷದ ಮುಖಂಡರಾದ ಕುತ್ಯಾರು ನವೀನ್ ಶೆಟ್ಟಿ, ವೀಣಾ ಎಸ್. ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ಶಶಿಕಾಂತ್ ಪಡುಬಿದ್ರಿ, ಶ್ರೀಶ ನಾಯಕ್ ಪೆರ್ಣಂಕಿಲ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಮಿಥುನ್ ಹೆಗ್ಡೆ, ಸುರೇಂದ್ರ ಪಣಿಯೂರು, ಪ್ರವೀಣ್ ಗುರ್ಮೆ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸುಮಾ ಶೆಟ್ಟಿ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ :ವಿರಾಟ್ ಕೊಹ್ಲಿಯ ಟಾಸ್ ಸೋಲಿನ ಕಥೆ! ಇಂಗ್ಲೆಂಡ್ ನಲ್ಲಿ ಟಾಸ್ ಸೋತಾಗೆಲ್ಲಾ ತಂಡಕ್ಕೆ ಸೋಲು
ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಕೆ. ರಾಜು, ಸಿಇಒ ಡಾ. ನವೀನ್ ಭಟ್ ಮೊದಲಾದವರು ಉಡುಪಿ ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.