Advertisement
ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ಒಲಂಪಿಕ್ ಸಂಸ್ಥೆ ಪದ್ಮಭೂಷಣ ಮೇಜರ್ ಧ್ಯಾನಚಂದ್ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಒಲಂಪಿಯನ್ ಗಳು ಮತ್ತು ಅಂತರಾಷ್ಟ್ರೀಯ ಕ್ರೀಡಾಪಟುಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು
Related Articles
Advertisement
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳನ್ನ ರಾಜಭವನದಲ್ಲಿ ಸನ್ಮಾಸಿಸ ಲಾಗುವುದು ಎಂದು ತಿಳಿಸಿದರು.
ಕ್ರೀಡಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಆಯವ್ಯಯದಲ್ಲಿ ಪೂರಕ ಅನುದಾನವನ್ನು ಒದಗಿಸಲಾಗುವುದು. ಗುಣಮಟ್ಟದ ಮೂಲಸೌಕರ್ಯವುಳ್ಳ ಕ್ರೀಡಾ ಸಂಕೀರ್ಣವನ್ನು ಸ್ಥಾಪಿಸಿ ಅಂತರರಾಷ್ಟ್ರೀಯ ಮಟ್ಟದ ತರಬೇತಿ, ಕೋಚಿಂಗ್ ಹಾಗೂ ಸೌಲಭ್ಯ ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಾಧಕರಿಗೆ ಸಾವು ಅಂತ್ಯವಲ್ಲ ಎಂದು ಸ್ವಾಮಿ ವಿವೇಕಾನಂದರು ತಿಳಿಸಿದ್ದರು. ಅಂತೆಯೇ ಸಾಧನೆಗೆ ಪರಿಶ್ರಮ ಬಹಳ ಮುಖ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕರ್ನಾಟಕದ ಮಾನ್ಯ ರಾಜ್ಯಪಾಲರು ಸ್ವತಃ ಕ್ರೀಡಾಪಟುಗಳಾಗಿದ್ದು, ಅನೇಕ ಅಂತರರಾಜ್ಯ ಹಾಗೂ ಅಂತರ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕರ್ನಾಟಕದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಒಲಂಪಿಕ್ಸ ಸಂಸ್ಥೆ ಸ್ಥಾಪಿಸಿರುವ ”Hall of fame” ಸಂಗ್ರಹಾಲಯ ವನ್ನು ಸ್ಥಾಪನೆ ಮಾಡಿ ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಸಾಧಕರ ಭಾವಚಿತ್ರ ಗಳನ್ನು ಸಂಗ್ರಹ ಯುವಜನರಿಗೆ ಸ್ಫೂರ್ತಿಯ ಸೆಲೆಯಾಗಿದೆ ಎಂದರು.
ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರೀಡೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಪ್ರೋತ್ಸಾಹ ನೀಡುತ್ತಿದ್ದಾರೆ. ಕ್ರೀಡೆಗೆ ಯಾವುದೇ ರೀತಿಯ ಸಹಕಾರ ಕೇಳಿದರೂ ಮುಖ್ಯಮಂತ್ರಿಗಳು ಇಲ್ಲ ಎಂದು ಹೇಳಿಲ್ಲ. ಪೊಲೀಸ್ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶಕ್ಕೆ ಮೀಸಲಾತಿ ಇರುವಂತೆ ಇತರ ಇಲಾಖೆಯಲ್ಲೂ ಶೇ. 2 ರಷ್ಟು ಮೀಸಲಾತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ.
ಬೆಂಗಳೂರಿನ ಜಕ್ಕೂರಿನಲ್ಲಿರುವ ಏರೋಡ್ರಮ್ ನಲ್ಲಿ ಪ್ರತಿ ವರ್ಷ 100 ಜನ ಪೈಲಟ್ ಗಳಿಗೆ ತರಬೇತಿ ನೀಡುವ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ. ಶೇ. 90 ರಷ್ಟು ಕೆಲಸ ಮುಗಿದಿದೆ. ಮುಂದಿನ ವರ್ಷ ಮಾರ್ಚ್ ನಲ್ಲಿ ಕ್ರೀಡಾ ಹಬ್ಬ ನಡೆಯಲಿದೆ. ಬೆಂಗಳೂರಿನಲ್ಲಿ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಡೆಯಲಿದೆ. ಅದೇ ರೀತಿ ಓಲಂಪಿಕ್ ನಲ್ಲಿ ಪದಕ ಗೆಲ್ಲುವ ಸಾಮರ್ಥ್ಯ ಇರುವಂತ 75 ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ನೀಡಲು “ಅಮೃತ ಕ್ರೀಡಾ ದತ್ತು ಯೋಜನೆ” ಜಾರಿಗೆ ತರಲಾಗಿದೆ. ತಲಾ 5 ಲಕ್ಷ ರೂ. ಪ್ರೋತ್ಸಾಹಧನ ನೀಡಿ ಕ್ರೀಡಾಪಟುಗಳನ್ನು ತರಬೇತಿಗೊಳಸಲಾಗುತ್ತದೆ ಎಂದು ಹೇಳಿದರು.
ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್, ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಕೆ. ಗೋವಿಂದರಾಜ್ ಮತ್ತು ಇತರರು ಭಾಗವಹಿಸಿದ್ದರು.