Advertisement

ನಾಡಹಬ್ಬ ದಸರಾ ಸರಳ ಆಚರಣೆಗೆ ತೀರ್ಮಾನ : ಸಿಎಂ ಬೊಮ್ಮಾಯಿ

06:03 PM Sep 03, 2021 | Team Udayavani |

ಬೆಂಗಳೂರು: ಈ ಬಾರಿಯ ಸರಳವಾಗಿ ನಾಡಹಬ್ಬ ದಸರಾ ಆಚರಣೆಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

Advertisement

ಇಂದು ನಡೆದ ದಸರಾ ಸಭೆಯ ಬಳಿಕ ಮಾಧ್ಯಮಗಳಿಗೆ ಮಾತನಾಡಿರುವ ಅವರು, ಕೋವಿಡ್ ಸೋಂಕು ಹಿನ್ನೆಲೆ ಕಳೆದ ವರ್ಷದಂತೆ ಈ ಬಾರಿಯ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತದೆ. ದಸರಾ ಸಂದರ್ಭದಲ್ಲಿ ಸಾಕಷ್ಟು ಆರ್ಥಿಕ ಚಟುವಟಿಕೆಗಳು ನಡೆಯುತ್ತಿತ್ತು. ಈಗ ಸರಳ ಆಚರಣೆ ಮಾಡಿದ್ದರಿಂದ ಅವರ ಆರ್ಥಿಕ ಚಟುವಟಿಕೆ ಹೊಡೆತ ಬಿದ್ದಿದೆ. ಇದರಿಂದ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

ಕಳೆದ ಬಾರಿಯ 8 ಕೋಟಿ ಬಾಕಿ ಹಣದ ಜೊತೆಗೆ ಹೊಸದಾಗಿ 6 ಕೊಟಿ ರೂ. ಬಿಡುಗಡೆ ಮಾಡಲಾಗಿದೆ. ಉದ್ಘಾಟನೆಗೆ ಯಾರನ್ನು ಕರೆಯಬೇಕು ಎಂಬುದರ ಕುರಿತು ಚಿಂತನೆ ಮಾಡುತ್ತೇವೆ. ಅರಮನೆ ಒಳಗೆ ಜಂಬು ಸವಾರಿ ಮಾಡಲಾಗುವುದು. ಚಾಮರಾಜನಗರ ಹಾಗೂ ಶ್ರೀರಂಗಪಟ್ಟಣ ದಸರಾ ಆಚರಣೆಯ ಬಗ್ಗೆಯೂ ಚರ್ಚೆಯಾಗಿದೆ ಎಂದರು.

ಇನ್ನು ಮೈಸೂರಿನಲ್ಲಿ ಇಂದು ನಡೆದ ಯುವತಿ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಮೈಸೂರು ಕಮಿಷನರ್ ಇಲ್ಲಿಗೆ ಬಂದಿದ್ದಾರೆ. ಅವರನ್ನು ಕರೆದು ನಿರ್ದೇಶನ ನೀಡುತ್ತೇನೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next