Advertisement

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗಿಯಾದ ಸಿಎಂ ಬಸವರಾಜ ಬೊಮ್ಮಾಯಿ

12:29 PM Nov 07, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ವರ್ಚುವಲ್ ಆಗಿ ಬೆಂಗಳೂರಿನ ಬಿಜೆಪಿ ಕಚೇರಿ ಜಗನ್ನಾಥ ಭವನದಿಂದ ಭಾಗವಹಿಸಿದ್ದರು.

Advertisement

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕಂದಾಯ ಸಚಿವ ಆರ್.ಅಶೋಕ್, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ್ , ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ಸಂಸದ ಡಾ. ಉಮೇಶ್ ಜಾಧವ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ , ರಾಜ್ಯ ಉಪಾಧ್ಯಕ್ಷ  ನಿರ್ಮಲ್ ಕುಮಾರ್ ಸುರಾನಾ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಭ್ರಷ್ಟಾಚಾರ ಮುಕ್ತ ಭಾರತವಾಗಲಿ: ಖೂಬಾ

ಇತ್ತೀಚೆಗೆ ನಡೆದ ಸಿಂದಗಿ ಉಪ ಚುನಾವಣೆಯಲ್ಲಿ ಜಯ ಗಳಿಸಿರುವ ಬಿಜೆಪಿಯ ರಮೇಶ ಭೂಸನೂರ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಜಲ‌ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next