Advertisement

ಗಡಿ ವಿಮೆ ವಿಚಾರವನ್ನು ಕೇಂದ್ರ ಗೃಹ ಸಚಿವರ ಗಮನಕ್ಕೂ ತರಲಾಗುವುದು: ಸಿಎಂ

11:33 PM Mar 16, 2023 | Team Udayavani |

ಬೆಂಗಳೂರು: ಮಹಾರಾಷ್ಟ್ರ ಸರಕಾರ ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾ­ರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ಖಂಡಿಸುತ್ತೇನೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜತೆಗೆ ಮಾತನಾಡಿದ್ದಾಗ, ಸುಪ್ರೀಂಕೋರ್ಟ್‌ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಆಗಬಾರದೆಂದು ಒಪ್ಪಲಾಗಿತ್ತು. ಆದರೆ ಈಗ ಅದರ ಉಲ್ಲಂಘನೆಯಾಗಿದೆ. ಕೂಡಲೇ ಈ ಆದೇಶವನ್ನು ಮಹಾರಾಷ್ಟ್ರ ಹಿಂದೆಗೆದು ಕೊಳ್ಳಬೇಕು ಎಂದು ಆಗ್ರಹಿಸಿದರು.

ಗಡಿ ವಿಮೆ ವಿಚಾರವನ್ನು ಗೃಹ ಸಚಿವರ ಗಮನಕ್ಕೂ ತರಲಾಗುವುದು. ಈ ರೀತಿಯ ಯೋಜನೆಗಳನ್ನು ನಾವೂ ಪ್ರಕಟಿಸಬಹುದು. ಹಲವಾರು ತಾಲೂಕುಗಳು, ಗ್ರಾಮ ಪಂಚಾ­ಯತ್‌ಗಳು ಮಹಾರಾಷ್ಟ್ರದಲ್ಲಿ ನಮಗೆ ನ್ಯಾಯ ಸಿಗುತ್ತಿಲ್ಲ, ಕರ್ನಾಟಕಕ್ಕೆ ಸೇರಬೇಕು ಎಂದು ಈಗಾಗಲೇ ನಿರ್ಣಯ ಮಾಡಿವೆ. ಇಂಥ ಪರಿ­ಸ್ಥಿತಿಯಲ್ಲಿ ಮಹಾರಾಷ್ಟ್ರ ಜವಾ­ಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next