Advertisement

ಬೆಳಗಾವಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

01:34 PM Jun 26, 2022 | Team Udayavani |

ಬೆಳಗಾವಿ: ಸಮೀಪದ ಕಲ್ಯಾಳ ಸೇತುವೆ ಸಮೀಪ ಇಂದು‌ ನಸುಕಿನಜಾವ ಕ್ರೂಸರ್ ಪಲ್ಟಿಯಾಗಿ ಗೋಕಾಕ ತಾಲ್ಲೂಕಿನ ಅಕ್ಕತಂಗೇರಹಾಳ ಗ್ರಾಮದ ಏಳು ಜನ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ವಾರಸುದಾರರಿಗೆ ಸರಕಾರದಿಂದ ಐದು ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.

Advertisement

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಅಪಘಾತದಲ್ಲಿ ಏಳು ಜನ ಕಾರ್ಮಿಕರು ಮೃತಪಟ್ಟಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಇನ್ನು ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸರಕಾರದಿಂದ ಐದು‌ ಲಕ್ಷ ರೂಪಾಯಿ ಮತ್ತು ಜಿಲ್ಲಾಧಿಕಾರಿಗಳ ಮೂಲಕವು ತಲಾ ಎರಡು ಲಕ್ಷ ರೂಪಾಯಿ ನೀಡಲಾಗುವುದು ಎಂದು ತಿಳಿಸಿದರು.

ಇದಲ್ಲದೇ ಅಪಘಾತದಲ್ಲಿ ಗಾಯಗೊಂಡಿರುವವರ ಚಿಕಿತ್ಸೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next