ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಭಾರತ್ ಸೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.25ರ ಭಾನುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಭಾರತ್ ಸ್ಕೌಟ್ಸ್ & ಗೈಡ್ಸ್ ಆಯೋಜಿಸಿರುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಮೂಡಬಿದಿರೆಯಲ್ಲಿ ನಡೆಯುತ್ತಿದೆ. ಮೋಹನ್ ಆಳ್ವಾ ಹಾಗೂ ಪಿ.ಜಿ.ಆರ್ ಸಿಂಧಿಯಾ ಅವರು ಬಹಳ ವ್ಯವಸ್ಥಿತವಾಗಿ ಈ ಕಾರ್ಯಕ್ರವನ್ನು ಆಯೋಜಿಸಿದ್ದಾರೆ.
ಎನ್‌ಸಿಸಿಯಂತೆ, ಭಾರತ್ ಸ್ಕೌಟ್ಸ್ & ಗೈಡ್ಸ್ ಕೂಡ ಮಕ್ಕಳಲ್ಲಿ ಶಿಸ್ತು, ದೇಶಭಕ್ತಿ ಮತ್ತು ಜೀವನದಲ್ಲಿ ಮೌಲ್ಯಗಳನ್ನು ಬೆಳೆಸಲು ಸಹಾಯ ಮಾಡುತ್ತದೆ. ಕರ್ನಾಟಕ ಸರ್ಕಾರವು ಹಿಂದಿನಿಂದಲೂ ಸ್ಕೌಟ್ಸ್ & ಗೈಡ್ಸ್ ಅನ್ನು ಬೆಂಬಲಿಸುತ್ತಿದೆ ಎಂದರು.
ಕೃಷ್ಣಾಪುರ ಜಲೀಲ್ ಪ್ರಕರಣ ಪ್ರತಿಕ್ರಯಿಸಿದ ಅವರು ಇಂತಹ ಘಟನೆ ದುರದೃಷ್ಟಕರ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದರು.