Advertisement

ಸಿಎಂ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಪ್ರವಾಸ : ಇಂದು ಸಭೆ

10:19 PM Aug 19, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಕೈಗೊಳ್ಳುವ ರಾಜ್ಯ ಪ್ರವಾಸದ ವೇಳಾ ಪಟ್ಟಿಯನ್ನು ಸಿದ್ಧಪಡಿಸಲು ಶನಿವಾರ ಪಕ್ಷದ ಪ್ರಮುಖರ ಸಭೆ ನಡೆಯಲಿದೆ.

Advertisement

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಳಿನ್‌ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸೇರಿ ಎರಡೂ ತಂಡಗಳಲ್ಲಿ ಯಾವ ಯಾವ ನಾಯಕರು ಪಾಲ್ಗೊಳ್ಳಬೇಕು. ಪ್ರವಾಸದ ವೇಳಾ ಪಟ್ಟಿ ಸೇರಿದಂತೆ ಎಲ್ಲ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next