ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವನೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದಲ್ಲಿ ಅ.11ರಿಂದ “ಜನಸಂಕಲ್ಪ ಯಾತ್ರೆ’ ಆರಂಭವಾಗಲಿದೆ ಎಂದು ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು.
150 ವಿಧಾನಸಭಾ ಕ್ಷೇತ್ರ ಗೆಲುವಿನ ಗುರಿ ಮುಟ್ಟುವ ಹಿನ್ನೆಲೆಯಲ್ಲಿ ಪಕ್ಷದ ವತಿಯಿಂದ ಈಗಾಗಲೇ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರ ತಂಡವು 50 ವಿಧಾನಸಭಾ ಕ್ಷೇತ್ರ ಮತ್ತು ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರ ನೇತೃತ್ವದ ತಂಡವು 25 ವಿಧಾನಸಭಾ ಕ್ಷೇತ್ರದ ಪ್ರವಾಸ ಪ್ರಾರಂಭವಾಗಿದೆ ಎಂದು ಹೇಳಿದರು.
ಅಕ್ಟೋಬರ್ 11ರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದ ತಂಡ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಒಟ್ಟು 50 ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಂಕಲ್ಪ ಯಾತ್ರೆ ನಡೆಸಲಿದೆ.
ಈಗಾಗಲೇ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ತಂಡವು 50 ವಿಧಾನಸಭಾ ಕ್ಷೇತ್ರ ಮತ್ತು ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರ ನೇತೃತ್ವದ ತಂಡವು 25 ವಿಧಾನಸಭಾ ಕ್ಷೇತ್ರದ ಪ್ರವಾಸ ಪ್ರಾರಂಭವಾಗಿದೆ ಎಂದರು.
ಅಕ್ಟೋಬರ್ 11ರಂದು ರಾಯಚೂರು ಗ್ರಾಮಾಂತರ, 12 ರಂದು (ವಿಜಯನಗರ) ಹೊಸಪೇಟೆ ಮತ್ತು ಕುಷ್ಟಗಿ, 13 ರಂದು ಹೂವಿನಹಡಗಲಿ ಮತ್ತು ಸಿರಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ನಡೆಯಲಿದೆ.
ಈ ಸಂದರ್ಭದಲ್ಲಿ ಬೃಹತ್ ಸಾರ್ವಜನಿಕ ಸಭೆ, ಜಿಲ್ಲಾ ಬಿಜೆಪಿ ಪ್ರಮುಖರ ಸಭೆ, ಶಾಸಕರ, ಸಂಸದರ ಸಭೆ ಹಾಗೂ ದೇವಸ್ಥಾನ ಭೇಟಿ ನಡೆಯಲಿದೆ ಎಂದರು.