ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾ. 16ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
Advertisement
ಬೆಳಗ್ಗೆ 10.30ಕ್ಕೆ ಮೇರಿಹಿಲ್ ಹೆಲಿಪ್ಯಾಡ್ನಲ್ಲಿ ಬಂದಿಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದ.ಕ. ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳ ಉದ್ಘಾಟಿಸಲಿದ್ದಾರೆ. ಬಳಿಕ ತುಮಕೂರು ಜಿಲ್ಲೆಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.