ಬೆಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಹೇಯಕೃತ್ಯ ಎಸಗಿದವರನ್ನ ಬಂಧಿಸಿ ಕಾನೂನಿನಡಿ ಹಂತಕರಿಗೆ ಶಿಕ್ಷೆ ಕೊಡಿಸುವುದಾಗಿ ಟ್ವೀಟ್ ಮಾಡಿದ್ದಾರೆ
ಹತ್ಯೆ ಮಾಡಿ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುವೆ. ಪ್ರವೀಣ್ ನೆಟ್ಟಾರು ಆತ್ಮಕ್ಕೆ ಶಾಂತಿ ಸಿಗಲೆಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ: ಅಪರಿಚಿತರಿಂದ ಬಸ್ ಗೆ ಕಲ್ಲೆಸೆತ; ಹಲವೆಡೆ ಬಂದ್
ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಪಾರ್ಥೀವ ಶರೀರ ಹಸ್ತಾಂತರ
ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪ್ರವೀಣ್ ನೆಟ್ಟಾರು ಮೃತದೇಹವನ್ನು ಬೆಳಗ್ಗೆ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯುತು. ಪುತ್ತೂರಿನಿಂದ ಸವಣೂರು ನಿಂತಿಕಲ್ಲು ಮಾರ್ಗವಾಗಿ ಪ್ರವೀಣ್ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕರೆತರಲಾಗುತ್ತಿದ್ದು, ಹುಟ್ಟೂರು ನೆಟ್ಟಾರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(29) ಅವರನ್ನು ನಗರದ ಬೆಳ್ಳಾರೆ ಪೇಟೆಯಲ್ಲಿ ಹತ್ಯೆ ಮಾಡಲಾಗಿದೆ. ಈ ಬರ್ಬರ ಹತ್ಯೆಯನ್ನು ಖಂಡಿಸಿ ಪುತ್ತೂರು, ಸುಳ್ಯ, ಕಡಬ ತಾಲೂಕಿನಲ್ಲಿ ಸ್ವಯಂಪ್ರೇರಿತ ಬಂದ್‌ಗೆ ವಿಎಚ್‌ಪಿ, ಭಜರಂಗದಳ, ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದ್ದಾರೆ.