ಬೆಂಗಳೂರು: ಮಾಜಿ ಸಚಿವ, ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಜೆ. ಅಲೆಕ್ಸಾಂಡರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಲೆಕ್ಸಾಂಡರ್ ಅವರು ಐಎಎಸ್ ಅಧಿಕಾರಿಯಾಗಿ ಹಲವಾರು ಹುದ್ದೆಗಳಲ್ಲಿ ಕೆಲಸ ಮಾಡಿ ಸೈ ಎನಿಸಿಕೊಂಡವರು. ನಂತರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಆಡಳಿತ ಸೇವೆ ನಂತರ ಅವರು ರಾಜಕೀಯ ಕ್ಷೇತ್ರಕ್ಕೆ ಧುಮುಕಿದರು. ಚುನಾವಣೆಯಲ್ಲಿ ಗೆದ್ದು ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಅವರ ನಿಧನದ ಸುದ್ದಿ ನನಗೆ ಬೇಸರ ತರಿಸಿದೆ ಎಂದು ಅವರು ತಿಳಿಸಿದ್ದಾರೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಕೋರುತ್ತೇನೆ ಎಂದು ಅವರು ಕಂಬನಿ ಮಿಡಿದಿದ್ದಾರೆ.