ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
Team Udayavani, Jan 23, 2022, 10:10 AM IST
ಬೆಂಗಳೂರು: ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ನ್ಯಾ. ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ನ್ಯಾ. ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈ ಕೋರ್ಟ್ ನ್ಯಾಯಾಧೀಶರಾಗಿ, ಕರ್ನಾಟಕ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.