Advertisement
75 ಸಾವಿರ ಮಕ್ಕಳಿಗೆ ವಿದ್ಯಾನಿಧಿ ವಿಸ್ತರಣೆ:
Related Articles
Advertisement
ಪ್ರತೀ ಕ್ಷೇತ್ರದಲ್ಲಿ ಸ್ವಯಂ ಉದ್ಯೋಗ :
ಬಾಬು ಜಗಜೀವನ್ ರಾಂ ಹೆಸರಿನಲ್ಲಿ ಸ್ವಯಂ ಉದ್ಯೋಗ ಯೋಜನೆ ವ್ಯಾಪ್ತಿಯಲ್ಲಿ ಪ್ರತೀ ವಿಧಾನ ಸಭಾ ಕ್ಷೇತ್ರದಲ್ಲಿ 100 ಪರಿಶಿಷ್ಟ ಜಾತಿ, ಪಂಗಡದ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅವಕಾಶ.
ವಿವೇಕ ಯೋಜನೆ:
ಶಿಕ್ಷಣ ಮತ್ತು ಅದರ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವ ಸಲುವಾಗಿ “ವಿವೇಕ’ ಯೋಜನೆ ಜಾರಿ. ಅದರ ವ್ಯಾಪ್ತಿಯಲ್ಲಿ ಮೊದಲ ಬಾರಿಗೆ 8 ಸಾವಿರ ಶಾಲಾ ಕೊಠಡಿಗಳ ನಿರ್ಮಾಣ.
ಆರೋಗ್ಯ ಕೇಂದ್ರ ಉನ್ನತ ಮಟ್ಟಕ್ಕೆ :
ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರ ಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತ ಮಟ್ಟಕ್ಕೇರಿಸುವ ಯೋಜನೆಗೆ ಚಾಲನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 71 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ.
ಸುಲಭ ಸಾಲ ಯೋಜನೆ :
ಸ್ತ್ರೀಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ 1.50 ಲಕ್ಷ ರೂ. ನೀಡುವ ಜತೆಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲು ಆ್ಯಂಕರ್ ಬ್ಯಾಂಕ್ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ “ಸ್ತ್ರೀ ಸಾಮರ್ಥ್ಯ ಯೋಜನೆ’ಗೆ ಚಾಲನೆ. ಸುಮಾರು 5 ಲಕ್ಷ ಮಹಿಳೆಯರ ಸ್ವಾವಲಂಬನೆಗೆ ಆಮೂಲಾಗ್ರ ನೆರವು.
ವಿವೇಕಾನಂದ ಸ್ವಸಹಾಯ ಸಂಘ :
ರಾಜ್ಯದ ಸುಮಾರು 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘ ರಚಿಸಿ ಯುವಕರಿಗೆ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಯೋಜನೆ. ಇದರಿಂದ 5 ಲಕ್ಷ ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗುವ ಅವಕಾಶ.
ಪುಣ್ಯಕೋಟಿ ದತ್ತು ಯೋಜನೆ :
ಗೋವುಗಳ ಸಂರಕ್ಷಣೆಯಲ್ಲಿ ಜನರ ಪಾಲು ದಾರಿಕೆಯನ್ನು ಉತ್ತೇಜಿಸಲು ಪುಣ್ಯಕೋಟಿ ದತ್ತು ಯೋಜನೆ ಜಾರಿ. ಈ ಯೋಜನೆಗೆ ಸಂಬಂಧಿಸಿದ ವೆಬ್‌ಸೈಟ್ ಲೋಕಾರ್ಪಣೆ. ಪ್ರತಿಯೊಬ್ಬ ವ್ಯಕ್ತಿಯೂ ವಾರ್ಷಿಕ 11,000 ರೂ. ಪಾವತಿಸಿ, ಒಂದು ಗೋವಿನ ಒಂದು ವರ್ಷದ ನಿರ್ವಹಣೆ ಮಾಡಬಹುದಾಗಿದೆ. ಗೋವು ದತ್ತು ಪಡೆಯಬಹುದು ಅಥವಾ 11 ಸಾವಿರ ರೂ. ನೀಡಿದರೆ ಗೋಶಾಲೆಗಳವರೇ ನೋಡಿಕೊಳ್ಳುತ್ತಾರೆ.