Advertisement
ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಆಯೋಜಿಸಲಾಗಿದ್ದ ದೇಶ ವಿಭಜನೆಯ ದುರಂತ ಘಟನೆಗಳು ಎಂಬ ಪತ್ರಿಕಾ ವರದಿಗಳ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ, ವೀಕ್ಷಣೆ ಮಾಡಿದ ಬಳಿಕ ಅವರು ಮಾತನಾಡಿದರು.
Related Articles
Advertisement
ಸಿದ್ದು ವಿರುದ್ಧ ಗರಂ: ಅಧಿಕಾರಕ್ಕೋಸ್ಕರ ಬೊಮ್ಮಾಯಿಯವರು ಆರ್‌ಎಸ್‌ಎಸ್‌ನವರ ಹಿಡಿತದಲ್ಲಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಪ್ರಾರಂಭದಲ್ಲಿ ಏಕವಚನದಲ್ಲೇ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಸಿದ್ದರಾಮಯ್ಯ ಆ ಹುಡುಗ ರಾಹುಲ್ ಗಾಂಧಿ ಮುಂದೆ ಕೈಕಟ್ಟಿಕೊಂಡು ನಿಂತ ಮೇಲೆ ಅವನದೆಲ್ಲ ಸ್ವಾಭಿಮಾನ ಮುಗಿದುಹೋಯ್ತು. ನಾವೆಲ್ಲ ಸಿದ್ದರಾಮಣ್ಣನ ಬಗ್ಗೆ ಬಹಳಷ್ಟು ಎತ್ತರಕ್ಕಿದ್ವಿ. ಅವನಿಗಿಂತ ಸಣ್ಣವಯಸ್ಸಿನ ರಾಹುಲ್ ಗಾಂಧಿ ಮುಂದೆ ದೆಹಲಿಗೆ ಹೋಗಿ ಕೈಕಟ್ಟಿಕೊಂಡು ನಿಲ್ತಾರೆ, ದಿನಗಟ್ಟಲೇ ಕಾಯ್ತಾರೆ ಅವರ ಮೇಲಿದ್ದ ಗೌರವ, ಸ್ವಾಭಿಮಾನ ಅಲ್ಲಿಗೆ ಮುಗಿಯಿತು ಎಂದರು.
ಕರಾಳ ದಿನ ನೋಡಿದಾಗ ಕಣ್ಣಲ್ಲಿ ನೀರು ಬರುತ್ತೆದೇಶ ವಿಭಜನೆಯ ಕರಾಳ ದಿನವನ್ನು ನೋಡಿದಾಗ ಕಣ್ಣಲ್ಲಿ ನೀರು ಬರುತ್ತದೆ. ಪೂರ್ವ ಹಾಗೂ ಪಶ್ಚಿಮ ದೇಶ ವಿಭಜನೆ ಆದಾಗ 10 ಲಕ್ಷ ಜನರು ವಲಸೆ ಆದರು. ದೊಡ್ಡ ಹಿಂಸಾಚಾರ, ಸಾವು-ನೋವು ಆಯಿತು. ಬಹಳಷ್ಟು ಕಡೆ ಹಸಿವಿನಿಂದ ಸತ್ತರು. ಇದು ಯಾಕೆ ಆಯಿತು ಎಂದು ಇತಿಹಾಸದಲ್ಲಿ ದಾಖಲೆ ಇದೆ. ಇದಕ್ಕೆ ಯಾರೆಲ್ಲ ಕಾರಣ ಅಂತಾನೂ ದಾಖಲೆ ಇದೆ. ಇದೊಂದು ದೊಡ್ಡ ದುರಂತ. ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ದೇಶವನ್ನು ಒಡೆಯುವ ಕೆಲಸ ಆಗಿದೆ. ರಕ್ತ ಭೂಮಿಗೆ ಚಲ್ಲಿದ್ದಾರೆ. ಸ್ವಾತಂತ್ರ್ಯ ಸಮಯದಲ್ಲಿ ಪ್ರಾಣ ಹೋಯಿತು. ವಿಭಜನೆ ಸಮಯದಲ್ಲಿ ಪ್ರಾಣ ಹೋಯಿತು. ದೇಶ ಒಂದಾಗಿದ್ದರೆ ಇಂತಹ ಘಟನೆ ತಪ್ಪಿಸಬಹುದಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.