Advertisement

40% Commission; ಲಕ್ಷ್ಮಣ ಸವದಿ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು

03:34 PM Apr 26, 2023 | Team Udayavani |

ಬೆಳಗಾವಿ: ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು. ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ ಸವದಿ ಅವರ ಹೇಳಿಕೆಗೆ ಅವರು ಬುಧವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಸವದಿ ಬಿಜೆಪಿಯಲ್ಲಿ ಇದ್ದಾಗಲೇ ಹೇಳಬಹುದಿತ್ತಲ್ಲ, ಏಕೆ ಸುಮ್ಮನಿದ್ದರು? ಎಂದು ಲಕ್ಷ್ಮಣ ಸವದಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದರು.

ವರ್ಚಸ್ಸು ಕೆಡಿಸುವ ಪ್ರಯತ್ನ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ ಮುಖ್ಯಮಂತ್ರಿಗಳು, ರಾಜ್ಯದ ಮುಖ್ಯಮಂತ್ರಿಗಳನ್ನು ಗುರಿಯಾಗಿಸಿ ಬಿಜೆಪಿ ಇಮೇಜ್ ಕೆಡಿಸಬೇಕು ಅಂತಿದ್ದಾರೆ. ಆದರೆ ಸಾಧ್ಯವಾಗುತ್ತಿಲ್ಲ. ಕಳೆದ ಒಂದೂವರೆ ವರ್ಷದಿಂದ ಸಿದ್ದರಾಮಯ್ಯ ಅವರು ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಅಂದ್ರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದ್ರೆ ಕಾಂಗ್ರೆಸ್. ಭ್ರಷ್ಟಾಚಾರ ಕಾಂಗ್ರೆಸ್ ಪಕ್ಷದ ಅವಿಭಾಜ್ಯ ಅಂಗವಾಗಿದೆ. ಹೀಗಿರುವಾಗ ಅವರು ಭ್ರಷ್ಟಾಚಾರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಕಿಡಿಕಾರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next