ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಮುಂಭಾಗ 10ಕೋಟಿ ರೂ.ಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ತಾಲೂಕು ಆಡಳಿತ ಭವನವನ್ನು ಲೋಕಾರ್ಪಣೆ ಮಾಡಿ, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಿಲನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್, ವಸತಿ ಸಚಿವರಾದ ಸೋಮಣ್ಣ, ಬಂದರು, ಒಳನಾಡು ಹಾಗೂ ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಆರೋಗ್ಯ ಸಚಿವರಾದ ಸುಧಾಕರ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಿಕ್ಷಣ ಸಚಿವರಾದ ನಾಗೇಶ್, ಸಂಸದರಾದ ನಳಿನ್ ಕುಮಾರ್ ಕಟೀಲು, ಸ್ಥಳೀಯ ಶಾಸಕರಾದ ಉಮನಾಥ್ ಕೋಟ್ಯಾನ್, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್,, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ತಹಶೀಲ್ದಾರ್ ಪುಟ್ಟರಾಜ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ್ ಆಳ್ವ, ಜನಪ್ರತಿನಿಧಿಗಳು ಹಾಗೂ ಗಣ್ಯರು ವೇದಿಕೆಯಲ್ಲಿದ್ದರು.