ಹುಬ್ಬಳ್ಳಿ: ಬಡವರು, ಸಾಮಾನ್ಯರ ಆರೋಗ್ಯಕ್ಕೆ ಮಹತ್ವದ ಸಹಾಯ ವಾಗುವ ರಾಜ್ಯದ 114 ,ನಮ್ಮ ಕ್ಲಿನಿಕ್ ಕೇಂದ್ರಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬುಧವಾರ ಹುಬ್ಬಳ್ಳಿ ಯಲ್ಲಿ ಏಕ ಕಾಲಕ್ಕೆ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು, ಬಡವರು, ಸಾಮಾನ್ಯರ ಆರೋಗ್ಯ ಕಾಳಜಿ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಸುಮಾರು 438 ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಜನೆವರಿ ಅಂತ್ಯದೊಳಗೆ ಈ ಎಲ್ಲ ಕ್ಲಿನಿಕ್ ಗಳನ್ನು ಆರಂಭಗೊಳಿಸಲಾಗುವುದು ಎಂದರು.
ತಮ್ಮ ಸರಕಾರ ಆರೋಗ್ಯ, ಶಿಕ್ಷಣಕ್ಕೆ ಒತ್ತು ನೀಡಿದೆ.ಆರೋಗ್ಯ ಇಲಾಖೆಗೆ 10 ಸಾವಿರ ಕೋಟಿ ರೂ.ಅನುದಾನ ನೀಡಿದ್ದರೆ,ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ಗಳನ್ನು ನಿರ್ಮಿಸಲಾಗುತ್ತದೆ.ಜನವರಿಯಲ್ಲಿ ರಾಜ್ಯಾದ್ಯಂತ 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯರಿಗೆ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕಗಳ ನೀಡಲಾಗುವುದು. ಎಲ್ಲ ಜಿಲ್ಲೆಗಳಲ್ಲಿ ಎಲ್ಲ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು. ಹಾವೇರಿ, ಉಡುಪಿ ಜಿಲ್ಲೆಗಳಲ್ಲಿ ಇದನ್ನು ಮಾಡಿಸಿದ್ದೇನೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ ಮಾತನಾಡಿ, ಮಹಿಳೆಯರಿಗಾಗಿ ಪ್ರತ್ಯೇಕ ಆಸ್ಪತ್ರೆ ವ್ಯವಸ್ಥೆ ಗೆ ಆಯುಷ್ಮತಿ ಕ್ಲಿನಿಕ್ ಗಳನ್ನು ಆರಂಭಿಸಲಾಗುತ್ತಿದೆ. ರಾಜ್ಯದಲ್ಲಿ1.2 ಕೋಟಿ ಆಯುಷ್ಮಾನ್ ಕಾರ್ಡ್ ನೋಂದಣಿಯಾಗಿದ್ದು, ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಡ್ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಹಾಲಪ್ಪ ಆಚಾರ, ಸಿ.ಸಿ.ಪಾಟೀಲ ಇನ್ನಿತರರು ಇದ್ದರು.