Advertisement
ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ – ಮೊಬೈಲ್ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿದರು.
Related Articles
Advertisement
ಇನ್ಫೋಸಿಸ್ ಪ್ರತಿಷ್ಠಾನ ಶಿಕ್ಷಣ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯಲ್ಲಿ ಬಹಳ ದೊಡ್ಡ ಪಾತ್ರವನ್ನು ರಾಜ್ಯದಲ್ಲಿ ವಹಿಸಿದೆ. ಜಯದೇವ ಸಂಸ್ಥೆಯಲ್ಲಿ 500 ಹಾಸಿಗೆಗಳ ಸಾಮರ್ಥ್ಯ ವುಳ್ಳ ಆಸ್ಪತ್ರೆಯನ್ನು ಒದಗಿಸಿದ್ದಾರೆ. ಕಿದ್ವಾಯಿ, ನಿಮ್ಹಾನ್ಸ್ ಸಂಸ್ಥೆಗಳಿಗೆ ಧರ್ಮ ಛತ್ರ ನಿರ್ಮಿಸಿ ರೋಗಿಗಳು ಹಾಗೂ ಅವರ ಸಂಬಂಧಿಕರಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದರು.
ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್: ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲೆಲ್ಲಿ ಆರೋಗ್ಯ ತಪಾಸಣೆಯ ಕೊರತೆ ಇರುವೆಡೆಗಳಲ್ಲಿ ಇಂತಹ ಸಂಚಾರಿ ಕ್ಲಿನಿಕ್ ಗಳನ್ನು ಒದಗಿಸಲಾಗುತ್ತಿರುವುದು ಒಳ್ಳೆಯ ನಡೆ. ಆರೋಗ್ಯ ಸೇವೆಗಳು ತಲುಪದೆ ಇರುವವರಿಗೆ ಈ ಸೇವೆಯನ್ನು ತಲುಪಿಸುವ ಉದ್ದೇಶದಿಂದ ರೋಟರಿ ಮತ್ತು ಇನ್ ಫೋಸಿಸ್ ಸಂಸ್ಥೆಯದ್ದಾಗಿದೆ. ಈ ಎರಡೂ ಸಂಸ್ಥೆಗೆ ಕೃತಜ್ಞತೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು, ಇದರ ಸದುಪಯೋಗವನ್ನು ಸರ್ಕಾರ ಮಾಡಿಕೊಳ್ಳಲಿದೆ ಎಂದರು. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಸಂಚಾರಿ ಕ್ಲಿನಿಕ್ ಇದಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಇದು ಉಪಯೋಗಕ್ಕೆ ಬರಲಿದೆ. ಇಂತಹ ಪ್ರಯೋಗಾಲಯಗಳ ಅವಶ್ಯಕತೆ ಇದೆ. ಈ ಬಗ್ಗೆ ಇನ್ಫೋಸಿಸ್ ಸೇರಿದಂತೆ ಹಲವು ಸಂಸ್ಥೆಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.