Advertisement

ಚಿರತೆ ಟಾಸ್ಕ್ ಫೋರ್ಸ್‌ ರಚಿಸಲು ಸಿಎಂ ಬೊಮ್ಮಾಯಿ ಸೂಚನೆ

10:59 PM Jan 24, 2023 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಚಿರತೆ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳ ಜತೆಗೆ ತುರ್ತು ಸಭೆ ನಡೆಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಚಿರತೆ ಟಾಸ್ಕ್ ಫೋರ್ಸ್‌ ರಚಿಸಲು ಸೂಚಿಸಿದ್ದಾರೆ.

Advertisement

ತಿ. ನರಸೀಪುರ ತಾಲೂಕಿನಲ್ಲಿ ಸಂಭವಿಸಿದ ಚಿರತೆ ದಾಳಿ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಈ ಚಿರತೆಯನ್ನು ಕೂಡಲೇ ಸೆರೆ ಹಿಡಿಯಲು ಎಲ್ಲ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಸ್ತುತ ಚಿರತೆ ಸೆರೆ ಹಿಡಿಯಲು 158 ಮಂದಿ ಕೆಲಸ ಮಾಡುತ್ತಿದ್ದಾರೆ. ಕೂಂಬಿಂಗ್‌ ಆಪರೇಷನ್‌ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಕರಣ ಸಂಭವಿಸಿದ 3-4 ಕಿ.ಮೀ. ಸುತ್ತಳತೆಯಲ್ಲಿ ಕೋಂಬಿಂಗ್‌ ಕಾರ್ಯಾಚರಣೆ ನಡೆಸಲು ಸೂಚಿಸಿದರು. ಚಿರತೆ ದಾಳಿಯಿಂದಾಗಿ ತಿ. ನರಸೀಪುರ ತಾಲೂಕಿನ 21 ಹಳ್ಳಿಗಳು ಬಾಧಿತವಾಗಿದೆ. ಈ ಹಳ್ಳಿಗಳಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳೀಯರ ನೆರವು ಪಡೆಯುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ಸಶಸ್ತ್ರ ಮೀಸಲು ಪೊಲೀಸ್‌ ಪಡೆಗಳ ನೆರವು ಪಡೆಯಲು ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ , ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್‌. ಶ್ರೀಕರ, ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next