Advertisement

ಪೆನ್ನಾರ್, ಕಾವೇರಿ ನದಿ ಜೋಡಣೆಗೆ ಸಿಎಂ ಬೊಮ್ಮಾಯಿ ತಾತ್ವಿಕ ವಿರೋಧ

02:57 PM Feb 08, 2022 | Team Udayavani |

ನವದೆಹಲಿ:ಗೋದಾವರಿ, ಕೃಷ್ಣಾ , ಪೆನ್ನಾರ್, ಕಾವೇರಿ ನದಿ ಜೋಡಣೆಗೆ ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಾತ್ವಿಕ ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಪಟ್ಟಂತೆ ತಂತ್ರಜ್ಞರು ಹಾಗೂ ಕಾನೂನು ತಜ್ಞರನ್ನು ಅವರು ಮಂಗಳವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಬಳಿಕ ಈ ಬಗ್ಗೆ ಮಾತನಾಡಿದ ಸಿಎಂ, ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ನಮ್ಮ ಪಾಲಿನ ನೀರು ಹಂಚಿಕೆಯಾಗುವವರೆಗೆ ವಿರೋಧವಿದೆ ಎಂದು ಹೇಳಿದರು.

ಎಲ್ಲಿಯವರೆಗೆ ನಮ್ಮ ಪಾಲಿನ ನೀರಿನ ಬಗ್ಗೆ ಹಂಚಿಕೆ ಅಂತಿಮವಾಗುದಿಲ್ಲವೋ, ಅಲ್ಲಿಯವರೆಗೆ ನಮ್ಮ ವಿರೋಧ ಇರುತ್ತದೆ. ಈ ಬಗ್ಗೆ ನಿರ್ಮಲಾ ಸೀತಾರಾಮನ್ ಜತೆಯೂ ಚರ್ಚಿಸಿದ್ದೇನೆ. ಅದಕ್ಕೆ ಅವರು ಎರಡು ರಾಜ್ಯಗಳು ಒಪ್ಪಿದರೆ ಮಾತ್ರ ಇದು ಸಾಧ್ಯ ಎಂದಿದ್ದಾರೆ ಎಂದು ವಿವರಿಸಿದರು.

ನದಿ ಜೋಡಣೆ ಬಗ್ಗೆ ಈ ವರ್ಷದ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಪರಿಸರ ತಜ್ಞರೂ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಮಧ್ಯೆ ಸಿಎಂ ಬೊಮ್ಮಾಯಿ ಕೂಡಾ ತಾತ್ವಿಕ ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next