ಉಡುಪಿ: ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗು, ದ.ಕ. ಕನ್ನಡದಲ್ಲಿ ಭೂ ಕುಸಿತ, ಭೂ ಕಂಪನಕ್ಕೆ ಸಂಬಂಧಿಸಿದಂತ ನಾಲ್ಕು ಸಂಸ್ಥೆಗಳ ಮೂಲಕ ಅಧ್ಯಯನಕ್ಕೆ ಸೂಚಿಸಲಾಗಿದೆ. ಕಡಲ್ಕೊರೆತಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಇದನ್ನೂ ಓದಿ: ಬಿಲ್ಲವ ಸಮಾಜದ ಮೂರು ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವ ಭರವಸೆ ನೀಡಿದ ಸಿಎಂ ಬೊಮ್ಮಾಯಿ
ಕರಾವಳಿಯ ಮೂರು ಜಿಲ್ಲೆಗಳ ಕಡಲ್ಕೊರೆತ, ಮಳೆಹಾನಿ, ಪ್ರವಾಹ ಪರಿಸ್ಥಿತಿ ಸಹಿತ ವಿವಿಧ ವಿಷಯಗಳ ಕುರಿತು ಅಧಿಕಾರಿಗಳ ಜತೆ ಸಮಗ್ರ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಸಚಿವರಾದ ಕೋಟ ಶ್ರೀವಾಸ ಪೂಜಾರಿ, ಎಸ್. ಅಂಗಾರ, ಆರ್. ಅಶೋಕ್, ಸಿ.ಸಿ.ಪಾಟೀಲ್, ಶಾಸಕರಾದ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುಕುಮಾರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.