ನವದೆಹಲಿ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರನ್ನು ಭೇಟಿ ಮಾಡಿದರು. ಸಿಎಂ ಪ್ರಕಾರ ಇದೊಂದು ಸೌಜನ್ಯದ ಭೇಟಿ.
ನಾರಿಮನ್ ಅವರು ಐದು ದಶಕಗಳಿಗೂ ಹೆಚ್ಚು ಕಾಲ ಕರ್ನಾಟಕದ ಪರ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ನೀರಿನ ವಿಷಯದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ಈಗ ಅವರ ಸಲಹೆಗಳು ಹೆಚ್ಚಿನ ಮೌಲ್ಯವನ್ನು ಹೊಂದಿವೆ. ರಾಮಕೃಷ್ಣ ಹೆಗಡೆ, ಸಾ.ರಾ.ಬೊಮ್ಮಾಯಿ, ಎಚ್.ಡಿ.ದೇವೇಗೌಡರಂತಹ ಮುಖ್ಯಮಂತ್ರಿಗಳ ಅವಧಿಯಲ್ಲಿ ಅವರು ಸೇವೆ ಸಲ್ಲಿಸಿದ್ದಾರೆ. “ಇದು ಕೇವಲ ಸೌಜನ್ಯದ ಭೇಟಿಯಾಗಿದೆ ಮತ್ತು ಅವರಿಗೆ ಧನ್ಯವಾದ ಹೇಳಲು ಬಂದಿದ್ದೇನೆ. ಅವರೊಂದಿಗೆ ರಾಜ್ಯದ ಗಡಿ ಅಥವಾ ನೀರಿನ ವಿವಾದದ ಬಗ್ಗೆ ಯಾವುದೇ ವಿಶೇಷ ಚರ್ಚೆ ನಡೆದಿಲ್ಲ”ಎಂದು ಹೇಳಿದ್ದಾರೆ.