ಹುಬ್ಬಳ್ಳಿ: ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾವಿಯಲ್ಲಿ ಇದೇ ಮಾ.19 ರಂದು ಕಲ್ಯಾಣ ಮಂಟಪ ಉದ್ಘಾಟನೆ ಬಗ್ಗೆ ಚರ್ಚೆ ಮಾಡಲು ಬಂದಿದ್ದೆ. ಈ ಕಲ್ಯಾಣ ಮಂಟಪಕ್ಕೆ ಬೇಕಾಗಿದ್ದ ಎರಡು ಎಕರೆ ಭೂಮಿಯನ್ನು ತಮ್ಮ ಸ್ವಂತ ಜಮೀನಿನಲ್ಲಿ ನೀಡಿದ್ದಾರೆ. ಹೀಗಾಗಿ ಈ ಕುರಿತು ಚರ್ಚಿಸಲು ಬಂದಿರುವುದಾಗಿ ತಿಳಿಸಿದರು.
ಪಂಚಮಸಾಲಿ 2 ಎ ಮೀಸಲಾತಿಗಾಗಿ ಹೋರಾಟ ಮುಂದುವರಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ವಿಚಾರದಲ್ಲಿ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುವಂತೆ ಸಿಎಂ ಜೊತೆ ಚರ್ಚೆ ಮಾಡಲಾಗಿದೆ. ಸಿಎಂ ಕೂಡ ಈ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯ ದಿನಗಳು ಬರಲಿವೆ. ಸ್ವಾಮೀಜಿಗಳಲ್ಲಿ ಭಿನ್ನಾಭಿಪ್ರಾಯದಿಂದ ಹೋರಾಟಕ್ಕೆ ಯಾವುದೇ ಹಿನ್ನಡೆ ಇಲ್ಲ. ಅದು ಅವರವರ ಕಲ್ಪನೆ ಅಷ್ಟೇ. ಅದರ ಬಗ್ಗೆ ಹೆಚ್ಚಿಗೆ ಮಾತನಾಡಲು ಇಷ್ಟಪಡುವುದಿಲ್ಲ. ಸಾಮಾಜಿಕ ನ್ಯಾಯ ಸಿಗಬೇಕು ಎನ್ನುವುದೇ ನಮ್ಮ ಉದ್ದೇಶವಾಗಿದೆ. ನಮ್ಮ ನಂಬಿಕೆ ಕಾನೂನಾತ್ಮಕ ಹಾಗೂ ಭಾವನಾತ್ಮಕವಾಗಿದೆ. ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ತೊಡಕುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಸರ್ಕಾರ ಈ ವಿಚಾರದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ನಾವು ಕಾಯುತ್ತಿದ್ದೇವೆ ಎಂದರು.
ಮಠಾಧೀಶರನ್ನು ಚುನಾವಣಾ ಸ್ಪರ್ಧೆ ವಿಚಾರ ಹಾಗೂ ತಾವೇನಾದರೂ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರದ ಕುರಿತು ನೋ ಕಮೆಂಟ್ಸ್ ಎಂದು ಉತ್ತರಿಸಿದರು.
ಕುಕ್ಕರ್ ಬಾಂಬ್ ಸ್ಫೋಟದ ಕುರಿತು ಉಗ್ರ ಸಂಘಟನೆ ಒಪ್ಪಿಕೊಂಡಿದೆ. ಇದಕ್ಕೆ ಡಿ.ಕೆ.ಶಿವಕುಮಾರ ಏನು ಹೇಳುತ್ತಾರೆ. ಅದೊಂದು ಸಾದಾ ಕುಕ್ಕರ್, ಈ ಪ್ರಕಣವನ್ನು ಬಿಜೆಪಿ ದುರ್ಬಳಿಕೆ ಮಾಡಿಕೊಳ್ಳುತ್ತಿದೆ ಎಂದು ಹೇಳಿದ್ದರು. ಈ ಕುರಿತು ಸುದ್ದಿಗಾರರು ಡಿ.ಕೆ.ಶಿವಕುಮಾರ ಅವರನ್ನು ಪ್ರಶ್ನಿಸಬೇಕು ಎಂದರು.
ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ವಿರೋಧ ಹಾಸ್ಯಸ್ಪದವಾಗಿದೆ. ಉದ್ಘಾಟನೆಗೆ ಎಲ್ಲರನ್ನು ಕರೆದಿದ್ದೇವೆ., ಅದು ಸರಕಾರದ ಕಾರ್ಯಕ್ರಮ ಕೋಟೆ ಸರಕಾರಕ್ಕೆ ಸೇರಿದ್ದು, ಅದನ್ನು ಪುನಃ ಉದ್ಘಾಟನೆ ಮಾಡಿರುವುದು ಹಾಸ್ಯಾಸ್ಪದ. ಶಿವಾಜಿ ಮೂರ್ತಿ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದರು.