Advertisement

ಹಿರಿಯ ಸಾಹಿತಿ ಚಂಪಾ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ

08:56 AM Jan 10, 2022 | Team Udayavani |

ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

Advertisement

ಹಾವೇರಿ ಜಿಲ್ಲೆಯ ಚಂದ್ರಶೇಖರ್ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾದವರು. ಚಂಪಾ ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು ಎಂದು ಚಂಪಾ ಅವರನ್ನು ಸಿಎಂ ಬಣ್ಣಿಸಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ ನಿಧನ

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿ ಮತ್ತು ಶಿಷ್ಯರಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಕೋರಿದ್ದಾರೆ.

Advertisement

ಬಿಎಸ್ ವೈ ಸಂತಾಪ: ಚಂದ್ರಶೇಖರ್ ಪಾಟೀಲ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಕೂ ಮಾಡಿರುವ ಅವರು, “ಕನ್ನಡದ ಕವಿ, ನಾಟಕಕಾರ, ವಿಮರ್ಶಕ, ಹೋರಾಟಗಾರ, ಚಂಪಾ ಎಂದೇ ಖ್ಯಾತರಾಗಿದ್ದ ಚಂದ್ರಶೇಖರ ಪಾಟೀಲ ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ನಾಡು ಒಬ್ಬ ಹಿರಿಯ ಕನ್ನಡದ ಧ್ವನಿಯನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿಯನ್ನು, ಕುಟುಂಬದವರಿಗೆ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

Koo App

Advertisement

Udayavani is now on Telegram. Click here to join our channel and stay updated with the latest news.

Next