Advertisement
ಗುರುವಾಗ ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ 31ರ ಮಾಹಿತಿಯಂತೆ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ. ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ, ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ, ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
Related Articles
Advertisement
ರಾಜ್ಯದಲ್ಲಿ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬೆಳೆಗಳ ಉತ್ಪಾದಕತೆಯನ್ನು ಸುಸ್ಥಿರ ಅಭಿವೃದ್ಧಿ ಗುರಿಯ ಮಟ್ಟಕ್ಕೆ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದರು. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಹಂಚಿಕೆ ಮಾಡುವಾಗ ರೈತ ಉತ್ಪಾದಕ ಸಂಘಗಳಿಗೆ ಆದ್ಯತೆ ನೀಡಲು ನಿರ್ದೇಶನ ನೀಡಿದರು.
ಕೃಷಿ ಸಿಂಚಾಯಿ ಯೋಜನೆಯಡಿ 57 ತಾಲ್ಲೂಕುಗಳ 2.75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ರಾಜ್ಯದ ಪಾಲಿನ ಅನುದಾನ ಮಂಜೂರು ಮಾಡಲಾಗಿದೆ. ಈ ಯೋಜನೆಯಡಿ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಿ, ಜಲಾನಯನ ಅಭಿವೃದ್ಧಿ ಕೆಲಸಗಳಿಗೇ ಹೆಚ್ಚಿನ ಒತ್ತು ನೀಡಬೇಕು ಹಾಗೂ ಹಿಂದಿನ ಯೋಜನೆಗಳ ಪರಿಣಾಮದ ಅಧ್ಯಯನ ವರದಿ ಸಲ್ಲಿಸುವಂತೆ ಮುಖ್ಯಂತ್ರಿಗಳು ತಿಳಿಸಿದರು.
ಕೃಷಿ ಯಾಂತ್ರೀಕರಣ ಉತ್ತೇಜನಕ್ಕಾಗಿ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಯನ್ನು ಈ ಮಾಸಾಂತ್ಯದೊಳಗೆ ಜಾರಿಗೊಳಿಸಲು ಸೂಚಿಸಿದರು.