ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದು, ಬೆಳಗ್ಗೆ ಶ್ರೀಕಂಠೇಶ್ವರ ದೇವಸ್ಥಾನ, ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಾಲಬ್ರೂಯಿ ವಸತಿಗೃಹದ ಪಕ್ಕದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ ಸಿಎಂ ಅರ್ಚನೆ ಹಾಗೂ ವಿಶೇಷ ಪೂಜೆ ಸಲ್ಲಿಸಿದರು
ಸಮಸ್ತ ರಾಜ್ಯದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಸಿಎಂಗೆ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ್, ಬೈರತಿ ಬಸವರಾಜ, ಶಾಸಕರಾದ ಬಿ ಜಿ ಪಾಟೀಲ್ ಸಾಥ್ ನೀಡಿದರು.
ದೇವಾಲಯದ ಹೊರಗೆ ಮುಖ್ಯಮಂತ್ರಿ ಯವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಕಾಯುತ್ತಿದ್ದ ಪೌರ ಕಾರ್ಮಿಕ ಮಹಿಳೆಯರ ಬೇಡಿಕೆಯನ್ನು ಮನ್ನಿಸಿ, ಅವರೊಂದಿಗೆ ಫೋಟೋ ತೆಗೆಸಿಕೊಂಡರು. ನಂತರ ಅವರ ಕಷ್ಟ ಸುಖ ಆಲಿಸಿದರು.
ಇದನ್ನೂ ಓದಿ : ಸಾಲವೋ, ಸಂಪನ್ನವೋ? : ಇಂದು ಸಿಎಂ ಬೊಮ್ಮಾಯಿ ಬಜೆಟ್
ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.