ಮೈಸೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಎಂ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಮೈಸೂರಿನ ಕಬಿನಿ ಜಲಾಶಯದ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದರು.
“ಹಾನಗಲ್ ಮೊದಲಿಂದಲೂ ಕಾಂಗ್ರೆಸ್ ಬೆಲ್ಟ್. ಇನ್ನೂ ಕೆಲವು ಸುತ್ತಿನ ಮತ ಎಣಿಕೆ ಬಾಕಿ ಇದೆ. ಹೀಗಾಗಿ ಹಾನಗಲ್, ಸಿಂಧಗಿ ಎರಡೂ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ” ಎಂದರು.
ಇದನ್ನೂ ಓದಿ:ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
“ಫಲಿತಾಂಶ ಬರಲು ಇನ್ನು ಸಮಯ ಇದೆ. ಹಾನಗಲ್ ನಲ್ಲಿ ಈ ರೀತಿಯ ಪೈಪೋಟಿ ನಿರೀಕ್ಷೆಯಲ್ಲಿದ್ದೆವು. ಯಾವಾಗಲೂ ಅಲ್ಲಿ ಪೈಪೋಟಿ ಇರುತ್ತದೆ. ಟಿಕೆಟ್ ವ್ಯತ್ಯಾಸದಿಂದ ಪೈಪೋಟಿಯಲ್ಲ. ಮೊದಲಿನಿಂದಲೂ ಆ ಕ್ಷೇತ್ರ ಜಿದ್ದಾಜಿದ್ದಿನ ಕ್ಷೇತ್ರ. ಇನ್ನು ಬಹಳ ಸುತ್ತುಗಳಿನ ಮತ ಎಣಿಕೆ ನಡೆಯಬೇಕಿದೆ. ನಮಗೆ ನೂರಕ್ಕೆ ನೂರು ಗೆಲ್ಲುವ ವಿಶ್ವಾಸವಿದೆ. ಉಪಚುನಾವಣೆ ಫಲಿತಾಂಶದಿಂದ ರಾಜಕೀಯ ಧೃವೀಕರಣವಾಗುವುದಿಲ್ಲ ಎಂದರು.
Related Articles
ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಎಂಬ ಸಿದ್ದರಾಮಯ್ಯ ಟ್ವೀಟ್ ವಿಚಾರಕ್ಕ ಪ್ರತಿಕ್ರಿಯೆ ನೀಡಿದ ಅವರು, ಪುನೀತ್ ರಾಜ್ ಕುಮಾರ್ ಬಗ್ಗೆ ನಮಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ. ಸಿದ್ದರಾಮಯ್ಯ ತಮ್ಮ ಪ್ರಸ್ತಾಪ ಸಲ್ಲಿಸಲಿ. ಸರ್ಕಾರ ಸಮಯ ಸಂಧರ್ಭ ನೋಡಿಕೊಂಡು ನಮ್ಮ ಪ್ರಸ್ತಾಪ ಸಿದ್ದಪಡಿಸುತ್ತೇವೆ. ಎಲ್ಲದಕ್ಕೂ ಒಂದು ನಿಯಮ ಪಾಲನೆ ಇರುತ್ತೆ. ಅದರ ಅಡಿಯಲ್ಲಿ ನಾವು ಸಾಗುತ್ತೇವೆ. ಪುನೀತ್ ರಾಜ್ ಕುಮಾರ್ ಎಲ್ಲಾ ಗೌರವಕ್ಕೂ ಅರ್ಹರು. ಅವರಿಗೆ ಇಂತಹ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ನಿಯಮಗಳನ್ನು ಪರಿಶೀಲನೆ ಮಾಡಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಎಂ.ಕಾರಜೋಳ, ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಮುನಿರತ್ನ, ಸಂಸದರಾದ ಪ್ರತಾಪ್ ಸಿಂಹ, ಸುಮಲತಾ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಶಾಸಕರು ಮತ್ತಿತರರು ಉಪಸ್ಥಿತರಿದ್ದರು.
– CM of Karnataka (@CMOKarnataka) 2 Nov 2021