ಬೆಂಗಳೂರು: ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ‘ಅವರು ಬೇರೆ ಅರ್ಥದಲ್ಲಿ ಹೇಳಿದ್ದಾರೆ’ ಎಂದು ವ್ಯಾಖ್ಯಾನಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಧುಸ್ವಾಮಿ ಬೇರೆ ಕಂಟೆಸ್ಟ್ ನಲ್ಲಿ ಮಾತನಾಡಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ. ಬೇರೆ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಯಾವುದೇ ರೀತಿಯ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅವರು ಸಹಕಾರ ಇಲಾಖೆ ವಿಚಾರವಾಗಿ ಮಾತ್ರ ಮಾತನಾಡಿದ್ದಾರೆ. ಈಗ ಎಲ್ಲವೂ ಸರಿಯಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಚಾಕು ಇರಿತ ಸಂಬಂಧ ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಯುತ್ತಿರುವಾಗ ನಾನು ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ದೇಶಭಕ್ತಿ ಕಿಚ್ಚು ಹೊತ್ತಿಸಿದ 9 ಕಿಮೀ ಉದ್ದದ ತ್ರಿವರ್ಣ ಧ್ವಜ ಮೆರವಣಿಗೆ
ತಕ್ಷಣವೇ ತನಿಖೆಗೆ ಆದೇಶ ಮಾಡಿದ್ದೇನೆ. ಪೊಲೀಸರು ಕೆಲಸ ಮಾಡುತ್ತಿದ್ದಾರೆ. ಅದರ ಬಗ್ಗೆ ಹೆಚ್ಚಿನದ್ದನ್ನು ಹೇಳುವುದಿಲ್ಲ ಎಂದರು.