ಬೆಂಗಳೂರು: ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಇದನ್ನೂ ಓದಿ:ಸ್ನೇಹಿತನ ಪಾರ್ಟಿಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡ ಗ್ಲೆನ್ ಮ್ಯಾಕ್ಸ್ ವೆಲ್
ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ವಿರೋಧದ ಬಗ್ಗೆ ಸುದ್ದಿಗಾರರ ಪ್ರತಿಕ್ರಿಯೆ ನೀಡಿದ ಅವರು, ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಅದನ್ನು ಕಲಿಯಲಿ ಎಂದರು.
ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು.