ಹೊಸದಿಲ್ಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದರು.
ದೆಹಲಿಯ ಕರ್ನಾಟಕ ಭವನದಿಂದ ಸಂಸತ್ ಭವನಕ್ಕೆ ತೆರಳಿದ ಸಿಎಂ ಬೊಮ್ಮಾಯಿ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ್ದಾರೆ. ದ್ರೌಪದಿ ಮುರ್ಮು ಅವರು ಬಿಜೆಪಿ ಅಭ್ಯರ್ಥಿಯಾಗಿ ರಾಷ್ಟ್ರಪತಿ ಹುದ್ದೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿದ್ದಾರೆ.
ಸಚಿವರಾದ ಬಿ ಶ್ರೀರಾಮುಲು, ಶಂಕರ ಪಾಟೀಲ್ ಮುನೇನಕೊಪ್ಪ, ಸಂಸದರಾದ ಶಿವಕುಮಾರ ಉದಾಸಿ, ಉಮೇಶ ಜಾದವ್ , ಶಾಸಕ ರಾಜುಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಗುಜರಾತ್ ಗಲಭೆ; ಪ್ರಧಾನಿ ಮೋದಿಗೆ ಕ್ಲೀನ್ ಚಿಟ್- ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ
Related Articles
ಇಂದು ವಾಪಾಸ್: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ನಗರಕ್ಕೆ ವಾಪಸ್ ಆಗಲಿದ್ದು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ, ನಿಗಮ ಮಂಡಳಿಗಳಿಗೆ ನೇಮಕ ಕುರಿತು ಯಾವುದೇ ಚರ್ಚೆ ನಡೆದಿಲ್ಲ.
ಗುರುವಾರ ದೆಹಲಿಗೆ ತೆರಳಿದ ಮುಖ್ಯಮಂತ್ರಿಯವರು ಪ್ರಹ್ಲಾದ್ ಜೋಶಿಯವರ ನಿವಾಸದಲ್ಲಿದ್ದು, ಯಾರನ್ನೂ ಭೇಟಿ ಮಾಡಲಿಲ್ಲ. ಶುಕ್ರವಾರವೂ ಯಾರ ಭೇಟಿ ನಿಗದಿಯಾಗಿಲ್ಲ ಎಂದು ಹೇಳಲಾಗಿದೆ.