Advertisement
ರಾಜ್ಯದ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಳಗಾವಿ ಜಿಲ್ಲೆಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ 597 ಕಾಮಗಾರಿಗಳು ಇವೆ. ಇದರಲ್ಲಿ ಕೇವಲ 215 ಕಾಮಗಾರಿಗಳ ಅಂದಾಜು ಪತ್ರಿಕೆಗಳಿಗೆ 2022 ಮಾ. 31ಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಆದರೆ ಇವತ್ತಿನವರೆಗೆ ಒಂದೂ ಕಾಮಗಾರಿ ಆರಂಭಿಸಿಲ್ಲ. ಇದು ನಿಮ್ಮ ಅಧ್ಯಕ್ಷತೆ ತೋರಿಸುತ್ತದೆ ಎಂದು ಕಿಡಿಕಾರಿದರು.
Related Articles
Advertisement
ಅಮೃತ ಗ್ರಾಪಂ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ಅತಿ ಕಡಿಮೆ ಪ್ರಗತಿ ಸಾಧಿಸಿದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಸ್ಮಾರ್ಟ್ ಸಿಟಿ ಮಾದರಿಯಲ್ಲಿ ಅಮೃತ ಯೋಜನೆಯಡಿ ಹಳ್ಳಿಗಳಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕಿದೆ. ಸೆ. 15ರೊಳಗೆ ಎಲ್ಲ ಕಾಮಗಾರಿ ಮುಗಿಸಿ ಅನುಮೋದನೆ ನೀಡಬೇಕು ಎಂದು ನಿರ್ದೇಶನ ನೀಡಿದ ಬೊಮ್ಮಾಯಿ, ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿಫಲ ಆಗಿದ್ದಕ್ಕೆ ಖೇದ ವ್ಯಕ್ತಪಡಿಸಿದರು.
ಜಿಪಂ ಉಪಕಾರ್ಯದರ್ಶಿ(ಅಭಿವೃದ್ಧಿ) ಬಸವರಾಜ ಹೆಗ್ಗನಾಯಕ, ಜಿಪಂ ಉಪಕಾರ್ಯದರ್ಶಿ(ಆಡಳಿತ) ಭೀಮಪ್ಪ ಲಾಳಿ, ಯೋಜನಾ ನಿರ್ದೇಶಕ ಬಂಗಾರಪ್ಪನವರ, ಕಾರ್ಯನಿರ್ವಾಹಕ ಅಭಿಯಂತ ಬಿರಾದಾರ ಪಾಟೀಲ, ಬಿದರಳ್ಳಿ, ಬಣಗಾರ ಇತರರು ಇದ್ದರು.