Advertisement

ಕಾಂಗ್ರೆಸ್ ಪರಿಚಯ ಜನರಿಗಿದೆ: ಸಿಎಂ ಬೊಮ್ಮಾಯಿ

01:16 PM Dec 13, 2022 | Team Udayavani |

ಮೈಸೂರು: ಜನರಿಗೆ ಮರೆವಿದೆ ಎಂದು ಕಾಂಗ್ರೆಸ್ ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಟ್ಟಾಗಿ ಹೋಗುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಅವರು ಒಟ್ಟಾಗಿ ಹೋಗುವುದು ಅವರಿಗೆ ಸಂಬಂಧಿಸಿದ ಆಂತರಿಕ ವಿಚಾರ. ನಾವು ಹೇಳುವುದೇನೂ ಇಲ್ಲ. ಮಹದಾಯಿ, ಕೃಷ್ಣಾ ಹಾಗೂ ಎಸ್.ಸಿ/ ಎಸ್.ಟಿ ವಿಚಾರಗಳಿಗೆ ಸಂಬಂಧಿಸಿದಂತೆ ಎರಡು ಸಮಾವೇಶಗಳನ್ನು ಮಾಡುವುದಾಗಿ ಹೇಳಿದರು.  ಮಹದಾಯಿ ಯೋಜನೆ ಸಮಸ್ಯೆಯಾಗಲು ಕಾಂಗ್ರೆಸ್ ಕಾರಣ. ಅವರ ಅಧಿನಾಯಕಿ ಸೋನಿಯಾ ಗಾಂಧಿ ಗೋವಾಕ್ಕೆ ಚುನಾವಣೆಗೆ ಹೋಗಿ ಮಹದಾಯಿಯ ಒಂದು ಹನಿ ನೀರನ್ನೂ ಬೇರೆಡೆಗೆ ತಿರುಗಿಸಲು ಬಿಡುವುದಿಲ್ಲ ಎಂದು ಹೇಳಿದರು. ಅವರಿಗೆ ಯಾವ ನೈತಿಕ ಹಕ್ಕಿದೆ. 5 ವರ್ಷಗಳಿದ್ದಾಗ ಏನೂ ಮಾಡಲಾಗಲಿಲ್ಲ. ಎಸ್.ಸಿ.ಎಸ್.ಟಿ ಗಳ 40 ವರ್ಷಗಳ ಬೇಡಿಕೆಯನ್ನು ತಿರುಗಿ ನೋಡಿರಲಿಲ್ಲ ಎಂದರು.

ಧೈರ್ಯ ಮಾಡಲಿಲ್ಲ: ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಒಳಮೀಸಲಾತಿಯನ್ನು ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. 5 ವರ್ಷ ಮುಖ್ಯಮಂತ್ರಿಗಳಾಗಿದ್ದಾಗ ವರದಿಯನ್ನು ಮಂಡಿಸುವ ಸಮಾವೇಶವೊಂದರಲ್ಲಿ ಕೇವಲ ದೀಪ ಹಚ್ಚಿ ಬಂದರು, ಮಾತನಾಡಲೂ ಇಲ್ಲ. ಎಲ್ಲಾ ನಡೆನುಡಿಗಳು ಜನರ ಮನದಾಳದಲ್ಲಿದೆ. ಅದನ್ನು ಮುಚ್ಚಿಹಾಕಲು ಸಮಾವೇಶ ಮಾಡಿದರು. ಜನರನ್ನು ಪದೇ ಪದೇ ಮರಳು ಮಾಡಲು ಸಾಧ್ಯವಿಲ್ಲ. ಹಿಂದೆ ಚುನಾವಣೆ ಸಂದರ್ಭದಲ್ಲಿ ಒಳಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಸಮ್ಮಿಶ್ರ ಸರ್ಕಾರದಲ್ಲಿ ಒಮ್ಮೆಯಾದರೂ ಒತ್ತಾಯ ಮಾಡಿದ್ದರೆ ಎಂದು ಪ್ರಶ್ನಿಸಿದರು.

ಗೊಂದಲ ಇಲ್ಲ: ಎಸ್.ಸಿ / ಎಸ್.ಟಿ ಮೀಸಲಾತಿ ಬಗ್ಗೆ ಗೊಂದಲಗಳೇನೂ ಇಲ್ಲ. ಪ್ರಶ್ನೆಗೆ ಉತ್ತರ ನೀಡಲಾಗುತ್ತಿದೆ. ಈಗ ಪ್ರಸ್ತಾವನೆ ಮುಂದಿದೆಯೇ ಎಂದು ಕೇಳಿದ್ದಾರೆ. ಸದ್ಯಕ್ಕಿಲ್ಲ, ನಾಳೆ ಪ್ರಸ್ತಾವನೆ ಹೋಗಲಿದೆ. ಇದನ್ನು ಕಾಂಗ್ರೆಸ್ ಹುಟ್ಟುಹಾಕುತ್ತಿದೆ. ಅವರಿಗೆ ಎಸ್.ಸಿ/ ಎಸ್.ಟಿ ಮತಗಳು ತಪ್ಪಿಹೋಗುತ್ತಿವೆ ಎನ್ನುವ ಆತಂಕದಿಂದ ಹೀಗೆ ಮಾಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next