ಹುಬ್ಬಳ್ಳಿ: ಆರ್ ಎಸ್ಎಸ್ ವಿರುದ್ಧ ಮಾತನಾಡುವುದೇ ಕಾಂಗ್ರೆಸ್ ಕೆಲಸವಾಗಿದೆ. ಹೀಗೆ ಟೀಕೆ ಮಾಡಿಯೇ ದೇಶದಲ್ಲಿ ಕಾಂಗ್ರೆಸ್ ಜನರಿಂದ ದೂರವಾಗಿದೆ. ಇದೀಗ ರಾಜ್ಯದಲ್ಲಿ ಸಿದ್ದರಾಮಯ್ಯ ಅದನ್ನೇ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ಆದರ್ಶ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 75 ವರ್ಷದಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ ದೇಶಭಕ್ತಿ ಮತ್ತು ಜನರ ಸೇವೆ ಮಾಡಿಕೊಂಡು ಬಂದಿದೆ. ಅವಘಡಗಳಾದಾಗ ಜನ ಸಂಕಷ್ಟದಲ್ಲಿದ್ದಾಗ, ಸರ್ಕಾರವೂ ಗಮನ ಹರಿಸದಿದ್ದಾಗ ಆರ್ ಎಸ್ಎಸ್ ಸ್ಪಂದಿಸಿದೆ. ಕಾಂಗ್ರೆಸ್‌ನವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಂಘವನ್ನು ಟೀಕಿಸುತ್ತಿದ್ದಾರೆ ಎಂದರು.
ಹೀಗೆ ವಿನಾಕಾರಣ ಟೀಕೆ ಮಾಡಿ ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಇಲ್ಲಂದತಾಗಿದೆ. ರಾಜಕೀಯ ಟೀಕೆಗಳಿಗಾಗಿ ದೇಶಭಕ್ತಿ ಸಂಘಟನೆ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇಲ್ಲಿಯೂ ಕೂಡ ಕಾಂಗ್ರೆಸ್ ಹೆಸರು ಹೇಳದಂತಹ ಮಟ್ಟಕ್ಕೆ ಹೋಗಲಿದೆ ಎಂದು ಹೇಳಿದರು.
ಇದನ್ನೂ ಓದಿ:ಸಚಿವ ನಾಗೇಶ್ ಹೇಳಿದ ಹಿಂದೂಗಳು ಯಾರು?: ಸಿದ್ದರಾಮಯ್ಯ ಪ್ರಶ್ನೆ
ಪಠ್ಯ ಪುಸಕ್ತದ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಶಿಕ್ಷಣ ಸಚಿವರು ಈಗಾಗಲೇ ಆ ಕುರಿತು ಉತ್ತರ ಕೊಟ್ಟಿದ್ದಾರೆ ಎಂದರು.
ರಾಜ್ಯಸಭೆ ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ವಿಚಾರದ ಕುರಿತು ಗೊತ್ತಾಗಬೇಕಾದರೆ ಜೂನ್ 10ರವರೆಗೆ ಕಾಯಿರಿ ಎಂದು ಪ್ರಶ್ನೆಯೊಂದಕ್ಕೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯಿಸಿದರು.