Advertisement

ಗಾಂಧಿ ಗ್ರಾಮ ಪುರಸ್ಕಾರ: ಪ್ರಸ್ತಾವನೆ ಪರಿಶೀಲನೆ ; ಸಿಎಂ ಬಸವರಾಜ ಬೊಮ್ಮಾಯಿ

09:53 PM Sep 15, 2022 | Team Udayavani |

ಬೆಂಗಳೂರು: 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಕಾಂಗ್ರೆಸ್‌ ಸದಸ್ಯ ಮಂಜುನಾಥ ಭಂಡಾರಿ  ಸೆ.12ರಂದು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದ ವಿಷಯಕ್ಕೆ ಗುರುವಾರ ಸದನಕ್ಕೆ ಉತ್ತರ ನೀಡಿರುವ ಮುಖ್ಯಮಂತ್ರಿಯವರು 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪ್ರತಿ ತಾಲೂಕಿಗೆ ಒಂದರಂತೆ ಒಟ್ಟು 176 ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಲಾಗಿದ್ದು, ಕೋವಿಡ್‌-19 ಹಿನ್ನೆಲೆಯಲ್ಲಿ ಪುರಸ್ಕಾರ ಅನುದಾನ ನೀಡಿರುವುದಿಲ್ಲ.  2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

ಪಂಚಾಯತ್‌ಗಳ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ವೇಗವನ್ನು ಹೆಚ್ಚಿಸಲು ಪಂಚಾಯತ್‌ರಾಜ್‌ ಸಂಸ್ಥೆಗಳಿಗೆ ಹಲವಾರು ಪ್ರೋತ್ಸಾಹಕ ಕ್ರಮಗಳನ್ನು ಜಾರಿಗೆ ತರಲಾಗಿದೆ. ಇದರ ಭಾಗವಾಗಿ 2013-14ರಿಂದ ಉತ್ತಮವಾಗಿ ಕಾರ್ಯನಿರ್ವಹಿಸುವ ಗ್ರಾ.ಪಂ.ಗಳಿಗೆ ತಾಲೂಕಿಗೆ ಒಂದರಂತೆ ಗಾಂಧಿ ಗ್ರಾಮ ಪುರಸ್ಕಾರ ನೀಡುವ ಯೋಜನೆ ತರಲಾಯಿತು. ಆಯ್ಕೆಯಾದ ಗ್ರಾ.ಪಂ.ಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಕ ಅನುದಾನ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಯವರು ಉತ್ತರದಲ್ಲಿ ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next