Advertisement
ಅವರು ಇಂದು ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
Related Articles
Advertisement
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಹಾರಾಷ್ಟ್ರದ ನಾಯಕರುಗಳು, ನಾವು ಗಂಭೀರವಾಗಿ ಇದೀವಿ ಅಂತ ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ ಎಂದರು.
ಜತ್ ತಾಲೂಕಿನ 42 ಗ್ರಾಮಸ್ಥರು ಸಿಎಂ ಭೇಟಿಗೆ ಅವಕಾಶ ಕೇಳಿರುವ ಬಗ್ಗೆ ಉತ್ತರಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.
ರಾಜಕೀಯ ಹೇಳಿಕೆ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಕುಡಿಯುವ ನೀರು ನೀಡುವ ನಿರ್ಣಯ ಮಾಡಿದ್ದರು. ಅವರು ಯಾಕೆ ಸೇರಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು. ಜವಬ್ದಾರಿಯುತ ಸ್ಥಾನದಲ್ಲಿದ್ದು ಎಲ್ಲವನ್ನೂ ಕಾನೂನು ಮತ್ತು ಸಂವಿಧಾನದ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಗೃಹ ಇಲಾಖೆಗೆ ಜೊತೆಗೆ ಈಗಾಗಲೇ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.