ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಇವತ್ತು ಸಂಜೆಯೊಳಗೆ ನಮ್ಮ ಅಭ್ಯರ್ಥಿಗಳ ಹೆಸರು ಪ್ರಕಟ ಆಗಲಿದೆ. ಎರಡು ಕ್ಷೇತ್ರಗಳಿಗೆ ಬಿಟ್ಟು ಉಳಿದ ಕ್ಷೇತ್ರಗಳಿಗೆ ಸಂಭಾವ್ಯರ ಹೆಸರು ಹೈಕಮಾಂಡ್ ಗೆ ಕಳುಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸ್ವರಾಜ್ ಯಾತ್ರೆಗಾಗಿ ಇಂದು ಕೊಪ್ಪಳಕ್ಕೆ ಹೋಗುತ್ತಿದ್ದೇನೆ. ಅಲ್ಲಿ ಜನ ಸ್ವರಾಜ್ ಯಾತ್ರೆಯಲ್ಲಿ ಭಾಗವಹಿಸುತ್ತೇನೆ. ಚುನಾಯಿತ ಜನಪ್ರತಿನಿಧಿಗಳನ್ನು ಯಾತ್ರೆ ವೇಳೆ ಭೇಟಿ ಮಾಡುತ್ತೇವೆ ಎಂದರು.
ಮಳೆಯಿಂದ ಕೃಷಿ ಬೆಳೆಗಳು ಹಾನಿಗೆ ಪರಿಹಾರ ಘೋಷಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ವರದಿ ಬಂದ ಬಳಿಕ ಪರಿಹಾರ ಕುರಿತು ನಿರ್ಧಾರ ಮಾಡುತ್ತೇವೆ ಎಂದರು.
ಇದನ್ನೂ ಓದಿ:ಬಿಟ್ ಕಾಯಿನ್ ವಿಚಾರವಾಗಿ ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ: ಬಿಎಸ್ ಯಡಿಯೂರಪ್ಪ
ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಆ್ಯಪ್ ಹ್ಯಾಕ್ ವಿಚಾರವಾಗಿ ಕೇಳಿದಾಗ, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಿಎಂ ಹೇಳಿದರು.