Advertisement

ಮಳೆಯಿಂದ ಹಾನಿ ಕುರಿತು ಕೇಂದ್ರಕ್ಕೆ 2-3 ದಿನಗಳಲ್ಲಿ ಮನವಿ ಸಲ್ಲಿಕೆ: ಸಿಎಂ ಬೊಮ್ಮಾಯಿ

01:28 PM Aug 11, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು ನಡೆಯುತ್ತಿರುವ ಸಮೀಕ್ಷೆಯ ವರದಿ ಶೀಘ್ರ  ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಿದೆ. ಇದರಿಂದ ಮೂಲ ಸೌಕರ್ಯಗಳು ಹಾಳಾಗಿವೆ. ತುರ್ತು ಕೆಲಸಕ್ಕಾಗಿ ರಾಜ್ಯ ಸರ್ಕಾರ 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಯಾಗಿದೆ. ಅದರ ಸಮೀಕ್ಷೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ:ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಪ್ರಮಾಣವಚನ ಸ್ವೀಕಾರ

ಈದ್ಗಾ ಮೈದಾನ ವಿವಾದದ ಕುರಿತು ಮಾತನಾಡಿದ ಅವರು, ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಸರ್ಕಾರದ ನೀತಿ ನಿಯಮಗಳ ಪ್ರಕಾರ ಸಭೆ ಸಮಾರಂಭಗಳು, ಉತ್ಸವಗಳನ್ನು ಕಾನೂನಿನ ಪ್ರಕಾರ ಕೈಗೊಳ್ಳಲಾಗುವುದು ಎಂದರು. ಯಾರೂ ಏನೇ ಹೇಳಿದರೂ ನಮಗೆ ಕಾನೂನು ಮುಖ್ಯ. ಕಾನೂನು ಬಿಟ್ಟು ಏನೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next