Advertisement

ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ: ಸಿಎಂ

09:02 PM Dec 04, 2022 | Team Udayavani |

ಹುಬ್ಬಳ್ಳಿ:  ರಾಜ್ಯದಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಡಿಸೆಂಬರ್‌ನಲ್ಲಿ ಈ ಯಾತ್ರೆಯನ್ನು ಮತ್ತಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ವರ್ಷವಾಗಿರುವುದರಿಂದ ಪ್ರತಿ ಚುನಾವಣೆಯಂತೆ ಜನರ ಬಳಿ ಹೋಗುತ್ತಿದ್ದೇವೆ. ಈಗಾಗಲೇ ನಮ್ಮ ಜನಸಂಕಲ್ಪ ಯಾತ್ರೆಯು ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ ಮತ್ತು ಮುಂಬೈ ಕರ್ನಾಟಕ ಭಾಗದ ಹಲವು ಕಡೆ ನಡೆದಿದೆ. ಜನರಿಂದಲೂ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಿ ಅವರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದರು.

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಗೋಡೆಗಳ ಮೇಲೆ “ಜಾಯಿನ್‌ ಪಿಎಫ್‌ಐ’ ಬರಹದ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next