ತುಮಕೂರು: ಕಲ್ಪತರು ನಾಡಿನ ಶ್ರೀಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಭಕ್ತರ ಪಾಲಿನ ದೇವರಾಗಿರುವ ತ್ರಿವಿಧ ದಾಸೋಹಿ ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಮೂರನೇ ವರ್ಷದ ಪುಣ್ಯ ಸ್ಮರಣೆಯ ದಿನದಂದು ರಾಜ್ಯ ಸರ್ಕಾರ ದಾಸೋಹ ದಿನ ವೆಂದು ಘೋಷಣೆ ಮಾಡಿ ಮಠದ ವಿದ್ಯಾರ್ಥಿಗೆ ದಾಸೋಹ ಬಡಿಸುವ ಮೂಲಕ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ದಾಸೋಹ ದಿನಕ್ಕೆ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ. ಶಿವಕುಮಾರ ಸ್ವಾಮಿಯವರ ಲಿಂಗೈಕ್ಯರಾದ ದಿನವನ್ನು ದಾಸೋಹ ದಿನ ಎಂದು ಆಚರಿಸಲು ಭಕ್ತರ ಒತ್ತಾಯ ಮೇರೆಗೆ ಸರ್ಕಾರ ಆಚರಣೆ ಮಾಡಲು ನಿರ್ಧಾರ ಮಾಡಿತ್ತು ಶುಕ್ರವಾರ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು.
ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ ಸಿ ಮಾಧುಸ್ವಾಮಿ, ಸಂಸದ ಜಿ.ಎಸ್. ಬಸವರಾಜ, ಶಾಸಕ ಜಿ.ಬಿ.ಜ್ಯೋತಿ ಗಣೇಶ್ , ಮಾಜಿ ಶಾಸಕ ಬಿ. ಸುರೇಶ್ ಗೌಡ ಉಪಸ್ಥಿತರಿದ್ದರು.
ಇದನ್ನೂ ಓದಿ:ಎನ್‌ಡಿಎಗೆ 296 ಸ್ಥಾನ ಖಚಿತ; ಇಂಡಿಯಾ ಟುಡೇ ಮೂಡ್ ಆಫ್ ದ ನೇಷನ್ ವರದಿ
ಇದೇ ವೇಳೆ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಶ್ರೀಗಳ ಗದ್ದುಗೆ ದರ್ಶನ ಪಡೆಯಲು ಕೊರೊನಾ ನಡುವೆಯೊ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.