Advertisement
ಈಗಾಗಲೇ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ. ಎರಡೂ ರಾಜ್ಯಗಳ ಮಧ್ಯೆ ವಿಷಮ ಪರಿಸ್ಥಿತಿ ಇದೆ. ಹೀಗಿರುವಾಗ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಯಾವುದೇ ಕಾರಣಕ್ಕೂ ಬರಬಾರದು ಎನ್ನುವ ಸಂದೇಶವನ್ನು ಈಗಾಗಲೇ ಕಳುಹಿಸಿದ್ದೇವೆ. ಹಿಂದೆ ಹಲವಾರು ಬಾರಿ ಈ ರೀತಿ ಪ್ರಯತ್ನ ಆದಾಗ ಕರ್ನಾಟಕ ಸರಕಾರ ಏನು ಕ್ರಮ ಕೈಗೊಂಡಿದೆಯೋ ಅದೇ ಕ್ರಮವನ್ನು ಈಗಲೂ ಕೈಗೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಮದುರ್ಗದಲ್ಲಿ ಸುದ್ದಿಗಾರರಿಗೆ ಸ್ಪಷ್ಟವಾಗಿ ಅವರು ತಿಳಿಸಿದರು.
Related Articles
ಮಹಾರಾಷ್ಟ್ರ ಸಚಿವದ್ವಯರು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಸಲಹೆ ನೀಡಿರುವ ಸಿಎಂ ಬೊಮ್ಮಾಯಿ ಅವರಿಗೆ ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ, “ನಾವು ಬೆಳಗಾವಿಗೆ ಬಂದೇ ಬರುತ್ತೇವೆ’ ಎಂದು ಸವಾಲು ಹಾಕಿದ್ದಾರೆ.
Advertisement
“ನಾವು ಬೆಳಗಾವಿಗೆ ಭೇಟಿ ನೀಡುವುದರಲ್ಲಿ ಯಾವುದೇ ಬದಲಾವಣೆ ಇಲ್ಲ. ಡಿ. 6ರಂದು ಬೆಳಗಾವಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇವೆ. ಅಂಬೇಡ್ಕರ್‌ವಾದಿ ಸಂಘಟನೆಯ ಆಹ್ವಾನದ ಮೇರೆಗೆ ಡಾ| ಅಂಬೇಡ್ಕರ ಮಹಾಪರಿನಿರ್ವಾಣ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳುತ್ತೇವೆ’ ಎಂದು ಶುಕ್ರವಾರ ಸಚಿವ ಚಂದ್ರಕಾಂತ ಪಾಟೀಲ ತಿಳಿಸಿದ್ದಾರೆ. ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ ರಾವುತ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಾರಾಷ್ಟ್ರದ ಸಚಿವರನ್ನು ಕರ್ನಾಟಕದಲ್ಲಿ ತಡೆಯಲು ಸಾಧ್ಯವಿಲ್ಲ. ಏಕನಾಥ ಶಿಂಧೆ ಸರಕಾರದ ಸಚಿವರಿಗೆ ಬೆಳಗಾವಿಗೆ ಹೋಗಲು ಆಗದಿದ್ದರೆ ಹೇಳಲಿ, ನಾವೇ ಬೆಳಗಾವಿ ಭೇಟಿ ನೀಡುತ್ತೇವೆ ಎಂದಿದ್ದಾರೆ.