Advertisement

“ಮಹಾ’ಸಚಿವರ ತಡೆಗೆ ಪ್ರತಿಬಂಧಕಾಸ್ತ್ರ

10:03 PM Dec 02, 2022 | Team Udayavani |

ರಾಮದುರ್ಗ: ಮಹಾರಾಷ್ಟ್ರದ ಸಚಿವದ್ವಯರು ಡಿ. 6ರಂದು ಬೆಳಗಾವಿಗೆ ಬರಲು ಸಜ್ಜಾಗಿರುವಂತೆಯೇ ಅವರ ಭೇಟಿಗೆ ವಿರೋಧ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಹಾ ಸಚಿವರು ಗಡಿ ಪ್ರವೇಶಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Advertisement

ಈಗಾಗಲೇ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಫ್ಯಾಕ್ಸ್‌ ಮೂಲಕ ಸಂದೇಶ ಕಳುಹಿಸಿದ್ದಾರೆ. ಎರಡೂ ರಾಜ್ಯಗಳ ಮಧ್ಯೆ ವಿಷಮ ಪರಿಸ್ಥಿತಿ ಇದೆ. ಹೀಗಿರುವಾಗ ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಯಾವುದೇ ಕಾರಣಕ್ಕೂ ಬರಬಾರದು ಎನ್ನುವ ಸಂದೇಶವನ್ನು ಈಗಾಗಲೇ ಕಳುಹಿಸಿದ್ದೇವೆ. ಹಿಂದೆ ಹಲವಾರು ಬಾರಿ ಈ ರೀತಿ ಪ್ರಯತ್ನ ಆದಾಗ ಕರ್ನಾಟಕ ಸರಕಾರ ಏನು ಕ್ರಮ ಕೈಗೊಂಡಿದೆಯೋ ಅದೇ ಕ್ರಮವನ್ನು ಈಗಲೂ ಕೈಗೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಮದುರ್ಗದಲ್ಲಿ ಸುದ್ದಿಗಾರರಿಗೆ ಸ್ಪಷ್ಟವಾಗಿ ಅವರು ತಿಳಿಸಿದರು.

ಜತ್‌ ತಾಲೂಕಿನ ಜನರಿಗೆ ನೀರು ಒದಗಿಸಲು ಮಹಾರಾಷ್ಟ್ರ ಸರಕಾರ ನೀರಾವರಿ ಯೋಜನೆಗೆ 2,000 ಕೋಟಿ ರೂ. ಘೋಷಣೆ ಮಾಡಿದೆ. ಕನ್ನಡಿಗರ ಸಹಿತ ಅಲ್ಲಿನ ಜನರು ಹಲವಾರು ವರ್ಷಗಳಿಂದ ಕುಡಿಯಲು ನೀರಿಲ್ಲದೆ ಬಳಲುತ್ತಿದ್ದರು. ಹೀಗಾಗಿ ಯೋಜನೆ ಮಾಡಿದ್ದಾಗಿ ಮಹಾರಾಷ್ಟ್ರ ನಾಯಕರು ಹೇಳಿದ್ದಾರೆ. ಆ ಭಾಗದ ಜನರಿಗೆ ನೀರು ಲಭಿಸುವುದು ಬಹಳ ಮುಖ್ಯ, ಅದು ಸಾಧ್ಯವಾಗಲಿ ಎಂದು ಬಯಸುತ್ತೇನೆ ಎಂದರು.

ಇದೇ ವೇಳೆ ರಾಮದುರ್ಗ ತಾಲೂಕಿನಲ್ಲಿ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ, ಉದ್ಘಾಟನೆ ನೆರವೇರಿಸಿದ ಸಿಎಂ ಬೊಮ್ಮಾಯಿ, ಕನ್ನಡಿಗರ ಅಭಿವೃದ್ಧಿ ಮತ್ತು ರಕ್ಷಣೆ ಸರಕಾರದ ಜವಾಬ್ದಾರಿ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ, ಅವರ ಅಭಿವೃದ್ಧಿಗೆ ನಾವು ಬದ್ಧರಾಗಿದ್ದೇವೆ ಎಂದರು. ಗಡಿಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ 100 ಕೋ.ರೂ. ವೆಚ್ಚ ಮಾಡಲಾಗುವುದು, ಸೋಲಾಪುರ ಹಾಗೂ ಕಾಸರಗೋಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ 10 ಕೋಟಿ ರೂ.ಗಳನ್ನು ಸರಕಾರ ನೀಡಲಿದೆ. ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯು ರಾಜ್ಯದ ಕಿರೀಟವಿದ್ದಂತೆ. ಈ ಜಿÇÉೆಯ ನೀರಾವರಿ, ಕೈಗಾರಿಕೋದ್ಯಮ, ಕೃಷಿ ಅಭಿವೃದ್ಧಿಗೆ ನೆರವು ನೀvಲಾಗುವುದು ಎಂದು ತಿಳಿಸಿದರು.

ಬೆಳಗಾವಿಗೆ ಬಂದೇ ಬರುತ್ತೇವೆ– ನಿಲ್ಲದ ಮಹಾ ಸಚಿವರ ಉದ್ಧಟತನ
ಮಹಾರಾಷ್ಟ್ರ ಸಚಿವದ್ವಯರು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಸಲಹೆ ನೀಡಿರುವ ಸಿಎಂ ಬೊಮ್ಮಾಯಿ ಅವರಿಗೆ ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ, “ನಾವು ಬೆಳಗಾವಿಗೆ ಬಂದೇ ಬರುತ್ತೇವೆ’ ಎಂದು ಸವಾಲು ಹಾಕಿದ್ದಾರೆ.

Advertisement

“ನಾವು ಬೆಳಗಾವಿಗೆ ಭೇಟಿ ನೀಡುವುದರಲ್ಲಿ ಯಾವುದೇ ಬದಲಾವಣೆ ಇಲ್ಲ. ಡಿ. 6ರಂದು ಬೆಳಗಾವಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇವೆ. ಅಂಬೇಡ್ಕರ್‌ವಾದಿ ಸಂಘಟನೆಯ ಆಹ್ವಾನದ ಮೇರೆಗೆ ಡಾ| ಅಂಬೇಡ್ಕರ ಮಹಾಪರಿನಿರ್ವಾಣ ಕಾರ್ಯಕ್ರಮದಲ್ಲಿಯೂ ಪಾಲ್ಗೊಳ್ಳುತ್ತೇವೆ’ ಎಂದು ಶುಕ್ರವಾರ ಸಚಿವ ಚಂದ್ರಕಾಂತ ಪಾಟೀಲ ತಿಳಿಸಿದ್ದಾರೆ. ರಾಜ್ಯಸಭಾ ಸದಸ್ಯ, ಶಿವಸೇನೆ ವಕ್ತಾರ ಸಂಜಯ ರಾವುತ್‌ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಾರಾಷ್ಟ್ರದ ಸಚಿವರನ್ನು ಕರ್ನಾಟಕದಲ್ಲಿ ತಡೆಯಲು ಸಾಧ್ಯವಿಲ್ಲ. ಏಕನಾಥ ಶಿಂಧೆ ಸರಕಾರದ ಸಚಿವರಿಗೆ ಬೆಳಗಾವಿಗೆ ಹೋಗಲು ಆಗದಿದ್ದರೆ ಹೇಳಲಿ, ನಾವೇ ಬೆಳಗಾವಿ ಭೇಟಿ ನೀಡುತ್ತೇವೆ ಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next