ಬೆಂಗಳೂರು: ಸಣ್ಣ ಭಾವನೆಗಳನ್ನು ಬಿಟ್ಟು, ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದಲ್ಲಿ ಸ್ತಬ್ಧಚಿತ್ರ ಪಾಲ್ಗೊಳ್ಳಲಿದೆ. ನಾರಿಶಕ್ತಿ ಸ್ತಬ್ಧ ಚಿತ್ರ ಒಂದು ವಾರದಲ್ಲಿ ಸಿದ್ಧಗೊಂಡಿದೆ ಎಂದು ಹೇಳಿದರು.
2009 ರಲ್ಲಿ ಯುಪಿಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ತಬ್ಧಚಿತ್ರವನ್ನು ನಿರಾಕರಿಸಲಾಗಿತ್ತು. ಕರ್ನಾಟಕದ ಬಗ್ಗೆ ಅಷ್ಟು ಸ್ವಾಭಿಮಾನ ಇರುವವರು, ಆಗ ಯಾರ ಮೇಲಾದರೂ ಒತ್ತಡ ಹೇರಿ ಸ್ತಬ್ಧಚಿತ್ರಕ್ಕೆ ಸ್ಥಾನ ಪಡೆದುಕೊಳ್ಳಬಹುದಿತ್ತು. ನಂತರ ಸತತ 14 ವರ್ಷ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದೆ ಎಂದು ತಿಳಿಸಿದರು.
ಕಳೆದ ಬಾರಿ ಪ್ರಶಸ್ತಿ ಪಡೆದವರಿಗೆ ಬೇರೆಯದರಲ್ಲಿ ಅವಕಾಶ ನೀಡಬೇಕೆಂಬ ವಿಚಾರವಿತ್ತು.ಆದಾಗ್ಯೂ ನಾನು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರಕ್ಷಣಾ ಸಚಿವರೊಂದಿಗೆ ಮಾತನಾಡಿದ್ದು, ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡಿದ್ದಾರೆ. ಕೇವಲ ಎಂಟು ಹತ್ತು ದಿನಗಳಲ್ಲಿ ಅದ್ಭುತವಾಗಿ ಸ್ತಬ್ಧಚಿತ್ರ ಮೂಡಿಬಂದಿದೆ ಎಂದು ಹೇಳಿದರು.
Related Articles
ವರ್ಗಾವಣೆ ಪ್ರಸ್ತಾಪ ಬೇಡ : ಸಿಎಂ ಕಟ್ಟಾಜ್ಞೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಹಾಗೂ ನಿಯೋಜನೆಗೆ ಸಂಬಂಧಪಟ್ಟ ಯಾವುದೇ ಕಡತಗಳನ್ನು ಮಂಡಿಸದಂತೆ ಸಿಎಂ ಬಸವರಾಜ ಬೊಮ್ಮಾಯಿ ಕಟ್ಟಾಜ್ಞೆ ಹೊರಡಿಸಿದ್ದಾರೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಎಲ್ಲ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸಿಎಂ ಸುತ್ತೋಲೆ ಹೊರಡಿಸಿದ್ದಾರೆ. ವರ್ಗಾವಣೆ ಅವಧಿ ಮುಕ್ತಾಯಗೊಂಡಿದೆ. ಬಜೆಟ್, ಜಂಟಿ ಅಧಿವೇಶನ ಹಾಗೂ ಚುನಾವಣೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ವರ್ಗಾವಣೆ ಹಾಗೂ ನಿಯೋಜನೆ ಪ್ರಸ್ತಾಪ ಸಲ್ಲಿಸದೇ ಇರಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.